ಕಾಡಿನಲ್ಲಿ ಇರಬೇಕಿದ್ದ ಚಿರತೆ ಆಗಾಗ್ಗೆ ನಾಡಿನಲ್ಲಿ ಕಾಣಿಸಿಕೊಂಡು ಜನರಲ್ಲಿ ಜೀವ ಭಯಕ್ಕೆ ಕಾರಣವಾಗುತ್ತಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಹಠಾತ್ತನೆ ಚಿರತೆಯೊಂದು ದಾಳಿ ನಡೆಸಿದೆ. ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಲ್ಲೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕರಿಯಣ್ಣ(55) ಹಾಗೂ ಶಿವಣ್ಣ(49) ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ವರೆಗೆ ನೂರಕ್ಕೂ ಹೆಚ್ಚು ಕುರಿಗಳನ್ನು ತಿಂದಿರುವ ಚಿರತೆ ಈಗ