ರಾಜಕೀಯ ನಾಯಕರಿಗೆ ಮಂಡ್ಯದ ಜನ, ಮಣ್ಣಿನ ಗುಣದ ಬಗ್ಗೆ ತಿಳಿಸಿದ ಸುಮಲತಾ

ಮಂಡ್, ಶುಕ್ರವಾರ, 15 ಮಾರ್ಚ್ 2019 (10:58 IST)

: ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸುವ ನಾಯಕರಿಗೆ ನಟಿ ಸುಮಲತಾ ಅಂಬರೀಶ್ ಅವರು ಮಂಡ್ಯ ಜನರ, ಹಾಗೂ ಮಣ್ಣಿನ ಗುಣದ ಬಗ್ಗೆ ತಿಳಿಸುವುದರ ಮೂಲಕ  ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.


ಸುಮಲತಾ ಅಂಬರೀಶ್ ಅವರು ತಮ್ಮ ಫೇಸ್‍ ಬುಕ್ ಪೇಜ್‍ನಲ್ಲಿ, “ಅಂಬರೀಶ್‍ರನ್ನು ಪ್ರಾಣಕ್ಕಿಂತ ಹೆಚ್ಚು ಪ್ರೀತಿಸುವ ಮಂಡ್ಯದ ಪ್ರತಿಯೊಬ್ಬರು ಅಂಬರೀಶ್ ಬಂಧುಗಳು. ಏಕೆಂದರೆ ಅಂಬರೀಶ್‍ರಲ್ಲಿ ಇರುವ ಗುಣವೇ ಮಂಡ್ಯದ ಜನರಲ್ಲಿ ಇದೆ. ಮಂಡ್ಯದ ಮಣ್ಣಿನ ಗುಣದಲ್ಲಿ ಕಪಟವೇ ಇಲ್ಲ. ಸುಳ್ಳುಗಳಿಲ್ಲ. ಸಮಯಕ್ಕೆ ತಕ್ಕ ಹಾಗೆ ಮಾತನಾಡುವ ಜಾಯಮಾನ ಮಂಡ್ಯದ ಮಣ್ಣಿನಲ್ಲಿ ಇಲ್ಲ.


ಮಂಡ್ಯದ ಮಣ್ಣು ಬರಿ ಮುಗ್ಧತೆಯಿಂದ ಕೂಡಿಲ್ಲ. ಅದು ಪ್ರಾಮಾಣಿಕತೆಯಿಂದಲೂ ಕೂಡಿದೆ. ಆ ಪ್ರಾಮಾಣಿಕತೆಗೆ ಮೋಸವೆಸಗುವ ರಾಜಕೀಯ ನನಗೆ ಬೇಕಾಗಿಲ್ಲ. ನನ್ನದು ಪ್ರಾಮಾಣಿಕವಾದ, ಅಂಬರೀಶ್ ಪಾಲಿಸುತ್ತಿದ್ದ ರಾಜಕೀಯ ಮಂಡ್ಯದ ಜನರ ರಾಜಕೀಯ” ಎಂದು ಪೋಸ್ಟ್ ಹಾಕಿದ್ದಾರೆ.


ಹಾಗೇ ಮತ್ತೊಂದು ಪೋಸ್ಟ್ ಮಾಡಿನಲ್ಲಿ ಅವರು, “ಅಂಬರೀಶ್ ರಾಜಕೀಯ ನಾಟಕವಿಲ್ಲದ, ಸುಳ್ಳು ಭರವಸೆಗಳಿಲ್ಲದ, ಒಳಗೊಂದು ಹೊರಗೊಂದು ಮಾತುಗಳಿಲ್ಲದ, ಜನರಿಂದ ಕೆಲಸವಾಗಬೇಕು ಎಂದಾಗ ಜನರೆದುರು ಕಪಟ ನಾಟಕವಾಡಿ ಮೋಸಗೊಳಿಸದ, ನೇರಾನೇರ ಇದ್ದದ್ದು ಇದ್ದ ಹಾಗೆ ಹೇಳುವ ದಿಟ್ಟ ನಡೆಯ ರಾಜಕೀಯ ಅಂಬರೀಶ್ ರಾಜಕೀಯ. ಆ ರಾಜಕೀಯವೇ ಅತ್ಯುತ್ತಮ. ಅಂಬರೀಶ್ ರಾಜಕೀಯವೇ ನಮ್ಮದಾಗಲಿ” ಎಂದು ಸುಮಲತಾ ಜೆಡಿಎಸ್ ವರಿಷ್ಠರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಚೇರಿಯ ಕೆಲಸಕ್ಕೆ ಸೈಕಲ್ ನಲ್ಲಿ ಬಂದ್ರೆ ಈ ದೇಶದಲ್ಲಿ ನೀಡ್ತಾರೆ ಬಂಪರ್ ಆಫರ್

ನೆದರ್ ಲ್ಯಾಂಡ್ : ವಾಯು ಮಾಲಿನ್ಯವನ್ನು ತಡೆಯುವ ನಿಟ್ಟಿನಲ್ಲಿ ನೆದರ್ಲ್ಯಾಂಡ್ ದೇಶದಲ್ಲಿ ಜನರಿಗೆ ಬಂಪರ್ ...

news

ಫೇಸ್ ಬುಕ್ ಸ್ನೇಹಿತನ ಜೊತೆ ಶಾರೀರಿಕ ಸಂಬಂಧ ಬೆಳೆಸುವ ವೇಳೆ ಶಾಕ್ ಆದ ಯುವತಿ. ಕಾರಣವೇನು ಗೊತ್ತಾ?

ಲಂಡನ್ : ಯುವತಿಯೊಬ್ಬಳಿಗೆ ಫೇಸ್ ಬುಕ್ ನಲ್ಲಿ ಪರಿಚಯನಾದ ಹುಡುಗಿಯೊಬ್ಬಳು ಹುಡುಗನ ವೇಷ ಧರಿಸಿ ಆಕೆಯ ...

news

ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ ಶೂನ್ಯ - ದಿನೇಶ್ ಗುಂಡೂರಾವ್ ವಾಗ್ದಾಳಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ ಶೂನ್ಯ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ...

news

ಕಾಂಗ್ರೆಸ್ ಗೆ ಬಿಗ್ ಶಾಕ್; ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಬಿಜೆಪಿಗೆ ಸೇರ್ಪಡೆ

ನವದೆಹಲಿ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಈ ವೇಳೆ ಕಾಂಗ್ರೆಸ್ ನ ಶಾಸಕರು ಬಿಜೆಪಿಗೆ ...

Widgets Magazine