ಸರಕಾರದ ಸಂಪೂರ್ಣ ವ್ಯವಸ್ಥೆಯೇ ಹಾಳಾಗಿ ಹೋಗಿದೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳು ತಪ್ಪು ಮಾಡಿದ್ರೆ ಸರಕಾರವೇ ಹೊಣೆ ಹೊರಬೇಕಾಗುತ್ತದೆ. ಇಬ್ಬರು ಹಿರಿಯ ಅಧಿಕಾರಿಗಳು ಪರಸ್ಪರ ಕೆಸರೆರಚಾಟ ಮಾಡುತ್ತಿರುವುದು ಸರಿಯಲ್ಲ ಎಂದರು. ಕಲಹ ರಾಜಕೀಯವೋ, ಅಡಳಿತ ವೈಫಲ್ಯವೋ ಗೊತ್ತಿಲ್ಲ. ಇದು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ವಿಚಾರವಾಗಿದೆ. ಕರಾವಳಿಯಲ್ಲಿ ನಡೆಯುತ್ತಿರುವ ಘಟನೆಗಳು ಬೇಸರ ತರಿಸಿವೆ. ಹಾಸನದ ಜಿಲ್ಲಾಡಳಿತ