ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದಿದ್ಯಾಕೆ?

ಚಾಮರಾಜನಗರ, ಗುರುವಾರ, 10 ಜನವರಿ 2019 (17:14 IST)

ಅಪಾರ ಬೆಲೆ ಬಾಳುವ ಹತ್ತಾರು ಎಕರೆ ಪ್ರದೇಶ ಹೊತ್ತಿ ಉರಿದ ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಬಂಡಿಪುರ ಅರಣ್ಯ ಪ್ರದೇಶದ ಕಾಡಂಚಿನಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಹೊತ್ತಿ ಉರಿದ ಗುಂಡ್ಲುಪೇಟೆ ತಾಲೂಕಿನ ಹತ್ತಾರು ಎಕರೆ ಅರಣ್ಯ ಪ್ರದೇಶ ಅಪಾರ ಹಾನಿಗೆ ಕಾರಣವಾಗಿದೆ. ಬಂಡಿಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಮೇಲುಕಾಮನಹಳ್ಳಿ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ದನ ಮೇಯಿಸುತ್ತಿದ್ದ ವ್ಯಕ್ತಿಗಳ ಕುಚೇಷ್ಟೆಯಿಂದ ಅರಣ್ಯಕ್ಕೆ ಬೆಂಕಿ ಬಿದ್ದಿದೆ ಎನ್ನಲಾಗುತ್ತಿದೆ.
ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಅರಣ್ಯ ಪ್ರದೇಶಕ್ಕೆ ವ್ಯಾಪಿಸುವುದಕ್ಕೂ ಮೊದಲು ಬೆಂಕಿಯನ್ನು ಸ್ಥಳೀಯರು ನಂದಿಸಿದರು.

ಕಿಡಿಕೇಡಿಗಳ ಪತ್ತೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಆ ಊರಿನ ಮಂದಿ ಪೊರಕೆ ಮೆರವಣಿಗೆ ನಡೆಸಿದ್ಯಾಕೆ?

ಎಂ ಆರ್ ಪಿ ಎಲ್ ವಿರುದ್ಧ ಪೊರಕೆ ಮೆರವಣಿಗೆ ನಡೆಸಿ ಜೋಕಟ್ಟೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

news

ಕಾಟಾಚಾರಕ್ಕೆ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ?

ಕಾಟಾಚಾರಕ್ಕೆ ಸಚಿವರೊಬ್ಬರು ಆಸ್ಪತ್ರೆಗೆ ಭೇಟಿ ನೀಡಿರುವ ಆರೋಪ ಕೇಳಿಬಂದಿದೆ.

news

ಎಂಪಿ ಚುನಾವಣೆ: ಮಂಡ್ಯಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗಲಿ ಎಂದವರಾರು ಗೊತ್ತಾ?

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ...

news

ಜ.14ರಂದು ಅಂಬಿಗರ ಚೌಡಯ್ಯ ಶರಣ ಸಂಸ್ಕೃತಿ ಉತ್ಸವ, ಮಹಾರಥೋತ್ಸವ

ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಶರಣ ಸಂಸ್ಕೃತಿ ಉತ್ಸವ ಮತ್ತು ಪ್ರಥಮ ಮಹಾರಥೋತ್ಸವವನ್ನು ಜ.14ರಂದು ಆಚರಣೆ ...