ಮಂಗಳೂರು : ನೂತನ ಸರ್ಕಾರ ರೈತರ ಸಾಲಮನ್ನಾ ಮಾಡದಿದ್ದರೆ ಕರ್ನಾಟಕ ಬಂದ್ ಮಾಡುವುದಾಗಿ ಬಿಜೆಪಿ ಹೇಳಿರುವ ಹಿನ್ನಲೆಯಲ್ಲಿ ಮಾಜಿ ಸಚಿವ ಹಾಗೂ ಶಾಸಕ ಯು.ಟಿ. ಖಾದರ್ ಅವರು,’ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಬಗ್ಗೆ ಬಿಜೆಪಿ ಮಾತನಾಡುವುದಿಲ್ಲ. ಬದಲಾಗಿ ರಾಜಕೀಯ ಪ್ರೇರಿತವಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದ್ದಾರೆ.