ಬಿಜೆಪಿಯಲ್ಲಿರುವ ಭಿನ್ನಮತ ಶೀಘ್ರವೇ ಶಮನ: ಜನಾರ್ದನ ರೆಡ್ಡಿ

ಕೋಲಾರ, ಶುಕ್ರವಾರ, 5 ಮೇ 2017 (12:45 IST)

Widgets Magazine

ರಾಜ್ಯ ಬಿಜೆಪಿಯಲ್ಲಿರುವ ಭಿನ್ನಮತ ಶೀಘ್ರವೇ ಶಮನವಾಗುವ ವಿಶ್ವಾಸವಿದೆ. ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.
 
ಪಕ್ಷದ ಹೈಕಮಾಂಡ್ ನೀಡುವ ಯಾವುದೇ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಪಕ್ಷವನ್ನು ಗೆಲ್ಲಿಸುವುದು ನಮ್ಮ ಗುರಿಯಾಗಲಿದೆ ಎಂದು ತಿಳಿಸಿದ್ದಾರೆ. 
 
ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಕೋಲಾರ ಜಿಲ್ಲೆಯ ನೀರಿನ ಸಮಸ್ಯೆಯನ್ನು ನಿವಾರಿಸುತ್ತೇವೆ. ಜಿಲ್ಲೆಯಲ್ಲಿರುವ ಕೆರೆಗಳನ್ನು ಭರ್ತಿ ಮಾಡುವುದು ಸೇರಿದಂತೆ ಇತರ ಜಲಸಂಪನ್ಮೂಲವನ್ನು ಕ್ರೂಢೀಕರಿಸಲಾಗುವುದು ಎಂದರು. 
 
ಕೋಲಾರ ಜಿಲ್ಲೆಯ ಭಾಗದಲ್ಲಿ ಪಕ್ಷದ ಗೆಲುವಿಗಾಗಿ ಶ್ರಮಿಸುತ್ತೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನಕಲಿ ಅಂಕಪಟ್ಟಿ ಮಾರುತ್ತಿರುವವರ ಬಂಧನ

ಬೆಂಗಳೂರು: ನಗರದಲ್ಲಿ ನಕಲಿ ಅಂಕಪಟ್ಟಿ ಮಾರುತ್ತಿರುವವರನ್ನು ಸಿಸಿಬಿ ಮತ್ತು ಹಲಸೂರು ಪೊಲೀಸ್ ಠಾಣೆಯ ...

news

ಬಿಎಸ್‌ವೈ ತಂಗಿ, ಕುಟುಂಬಸ್ಥರನ್ನು ನಿಂದಿಸಿದ ಕಾ.ಪು.ಸಿದ್ದಲಿಂಗಸ್ವಾಮಿ

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತಂಗಿ, ಕುಟುಂಬಸ್ಥರನ್ನು ಅವರ ಆಪ್ತ ...

news

ಭೂವಿವಾದಗಳಿಂದ ದೂರವಿರಿ: ಪೊಲೀಸರಿಗೆ ಸಿಎಂ ವಾರ್ನಿಂಗ್

ಬೆಂಗಳೂರು: ಭೂ ವಿವಾದಗಳನ್ನು ಇತ್ಯರ್ಥಗೊಳಿಸುವಲ್ಲಿ ಪೊಲೀಸರು ನೇರವಾಗಿ ಅಥವಾ ಪರೋಕ್ಷವಾಗಿ ...

news

ಎಚ್.ವಿಶ್ವನಾಥ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲ್ಲ: ಎಚ್.ಎಂ.ರೇವಣ್ಣ

ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನುವ ...

Widgets Magazine