Widgets Magazine
Widgets Magazine

ಚುನಾವಣೆ ಪ್ರಣಾಳಿಕೆಗೆ ಅಂತಿಮ ಸ್ವರೂಪ– ವೀರಪ್ಪ ಮೊಯ್ಲಿ

ಕಲಬುರ್ಗಿ, ಭಾನುವಾರ, 7 ಜನವರಿ 2018 (20:12 IST)

Widgets Magazine

ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಗೆ ಇದೇ ತಿಂಗಳ ಅಂತ್ಯದಲ್ಲಿ ಅಂತಿಮ ಸ್ವರೂಪ ನೀಡಲಾಗುವುದು ಎಂದು ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿಯ ಕಲಬುರಗಿ ವಿಭಾಗ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ನೀತಿ ಏನಾಗಿರಬೇಕು, ಮುಂದೆ ಅಭಿವೃದ್ಧಿ ಪಥದ ಮೈಲುಗಲ್ಲು ಏನಾಗಿರಬೇಕು ಎನ್ನುವ ಬಗ್ಗೆ ಮುಖಂಡರ ಹಾಗೂ ಕಾರ್ಯಕರ್ತರ ಅಭಿಪ್ರಾಯ ಪಡೆಯಲಾಗುತ್ತಿದೆ. ರಾಜ್ಯದ ಐದು ಕಡೆ ಈಗಾಗಲೇ ವಿಭಾಗ ಮಟ್ಟದ ಸಭೆ ನಡೆಸಲಾಗಿದ್ದು, 6ನೇ ವಿಭಾಗ ಮಟ್ಟದ ಸಭೆ ಚಿತ್ರದುರ್ಗದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.
 
ಕಳೆದ 2013ರ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳಲ್ಲಿ ಶೇಕಡಾ 98 ರಷ್ಟು ಅನುಷ್ಠಾನಗೊಳಿಸಲಾಗಿದೆ. ಪ್ರಣಾಳಿಕೆಯನ್ನು ಮುಖ್ಯಮಂತ್ರಿ, ಪಕ್ಷದ ಅಧ್ಯಕ್ಷರು ಮತ್ತು ಪಕ್ಷದ ಪ್ರಮುಖಕರ ಮುಂದಿಟ್ಟು ಅದಕ್ಕೆ ಅಂತಿಮ ಸ್ವರೂಪ ನೀಡಲಾಗುವುದು ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸರಣಿ ಕೊಲೆಗಳಿಗೆ ಸರ್ಕಾರದ ವೈಫಲ್ಯ ಕಾರಣ– ದೇವೇಗೌಡ

ರಾಜ್ಯದಲ್ಲಿ ಸರಣಿ ಕೊಲೆಗಳು ನಡೆಯಲು ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಜೆಡಿಎಸ್ ರಾಷ್ಟ್ರೀಯ ...

news

ಮಹಾದಾಯಿ ವಿಚಾರದಲ್ಲಿ ಕಾಂಗ್ರೆಸ್ ಭಿನ್ನರಾಗ– ಪ್ರಹ್ಲಾದ್ ಜೋಷಿ

ಮಹಾದಾಯಿ ನೀರಿನ ವಿಚಾರದಲ್ಲಿ ಪ್ರಧಾನಮಂತ್ರಿ ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸುವ ಕಾಂಗ್ರೆಸ್‌, ಮೋದಿ ...

news

ದೇವರು, ಧರ್ಮದ ಹೆಸರಿನಲ್ಲಿ ಅಧಿಕಾರ ಹಿಡಿಯಲು ಯತ್ನ– ಸಿದ್ದರಾಮಯ್ಯ

ದೇವರು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ ಅಧಿಕಾರ ಹಿಡಿಯಲು ಯತ್ನಿಸುತ್ತಿರುವವರಿಗೆ ಚುನಾವಣೆಯಲ್ಲಿ ತಕ್ಕ ...

news

ಚಿತ್ರದುರ್ಗದಲ್ಲಿ ಸ್ಪರ್ಧೆಗೆ ನಟಿ ಭಾವನಾ ಸಿದ್ಧತೆ

ಮುಂದಿನ ಚುನಾವಣೆಯಲ್ಲಿ ಚಿತ್ರದುರ್ಗ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಚಿತ್ರನಟಿ ಭಾವನಾ ಸಿದ್ಧತೆ ...

Widgets Magazine Widgets Magazine Widgets Magazine