ಬರ ಪರಿಸ್ಥಿತಿ ನಿರ್ವಹಿಸುವಲ್ಲಿ ಸರಕಾರ ವಿಫಲ: ದೇವೇಗೌಡ

ಹಾಸನ, ಶನಿವಾರ, 4 ಮಾರ್ಚ್ 2017 (14:26 IST)

ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಬರ ಪರಿಸ್ಥಿತಿ ನಿರ್ವಹಿಸುವಲ್ಲಿ ವಿಫಲವಾಗಿದೆ ಎಂದು ಮಾಜಿ ಪ್ರಧಾನಿ ಆರೋಪಿಸಿದ್ದಾರೆ.
 
ಹಾಸನ ಜಿಲ್ಲೆಯ ಅರಸಿಕೇರೆ ತಾಲೂಕಿನ ವಿವಿಧ ಕಾಮಗಾರಿಗಳಿಗೆ 650 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದರು. ಆದರೆ, ಜಿಲ್ಲೆಯಲ್ಲಿ ಕುಡಿಯುವ ನೀರು ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಿವೆ ಎಂದರು.
 
ಒಂದು ವೇಳೆ, ಅಧಿಕಾರಿಗಳು ಬರ ಪರಿಸ್ಥಿತಿ ನಿರ್ವಹಿಸುವಲ್ಲಿ ವಿಫಲವಾದಲ್ಲಿ ಸಿಎಂ ಮನೆಯ ಮುಂದೆ ಧರಣಿ ನಡೆಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾಗಿ ತಿಳಿಸಿದ್ದಾರೆ.
 
ಜಿಲ್ಲೆಯಲ್ಲಿ ಈಗಾಗಲೇ ನೀರಿನ ಅಭಾವ ಕಾಡುತ್ತಿದೆ. ತ್ವರಿತಗತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋರಾಟ ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
 
ಬೆಂಗಳೂರು ನಗರದಲ್ಲಿ ಮತ್ತೊಂದು ವಿಮಾನ ನಿಲ್ದಾಣ ಮಾಡುವ ಬದಲಿಗೆ ಎಚ್‌ಎಎಲ್ ವಿಮಾನ ನಿಲ್ದಾಣ ಪುನಾರಂಭ ಮಾಡುವುದು ಸೂಕ್ತ. ಈ ಕುರಿತಂತೆ ಕೇಂದ್ರ ವಿಮಾನಯಾನ ಸಚಿವರೊಂದಿಗೆ ಚರ್ಚೆ ನಡೆಸುವುದಾಗಿ ಮಾಜಿ ಪ್ರಧಾನಿ ದೇವೇಗೌಡರು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಮಿತ್ ಶಾ ಆದೇಶಗಳನ್ನು ಯಡಿಯೂರಪ್ಪ ಪಾಲಿಸುತ್ತಿಲ್ಲ: ಈಶ್ವರಪ್ಪ ಆಕ್ರೋಶ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೀಡಿದ ...

news

ಆಯೋಗದ ಅನುಮತಿ ಪಡೆಯದೇ ಮೋದಿ ರೋಡ್ ಶೋ

ವಾರಣಾಸಿ: ಆಯೋಗದ ಅನುಮತಿ ಪಡೆಯದೇ ಪ್ರಧಾನಿ ಮೋದಿ ರೋಡ್ ಶೋ ನಡೆಸುತ್ತಿದ್ದರೂ ಚುನಾವಣೆ ಆಯೋಗ ಏಕೆ ಕಣ್ಣು ...

news

ವ್ಯಾಟ್ಸಾಪ್ ನಲ್ಲಿ ತಲಾಖ್ ನೀಡಿದ ಭೂಪ!

ಹೈದರಾಬಾದ್: ತ್ರಿವಳಿ ತಲಾಖ್ ಬಗ್ಗೆ ಚರ್ಚೆಗಳಾಗುತ್ತಿರುವಾಗಲೇ ಇಲ್ಲೊಬ್ಬ ಪತಿ ಮಹಾಶಯ ಸಾಮಾಜಿಕ ...

news

ಶಾಕಿಂಗ್! ಜೂನ್ 30 ರಿಂದ ವ್ಯಾಟ್ಸಾಪ್ ಬಳಕೆ ಸ್ಥಗಿತ?!

ನವದೆಹಲಿ: ವ್ಯಾಟ್ಸಾಪ್ ಎನ್ನುವುದು ಇತ್ತೀಚೆಗೆ ಎಲ್ಲರ ಜೀವನದ ಅವಿಭಾಜ್ಯ ಅಂಗದಂತಾಗಿದೆ. ಆದರೆ ಅದರ ...

Widgets Magazine
Widgets Magazine