ಅಪಘಾತದ ಗಾಯಾಳು ರಕ್ಷಿಸಿ ಮಾನವೀಯತೆ ಮೆರೆದ ಶಾಸಕ

ದಾವಣಗೆರೆ, ಶನಿವಾರ, 13 ಅಕ್ಟೋಬರ್ 2018 (14:53 IST)

ಅಪಘಾತದಲ್ಲಿ ಗಾಯಾಳುವಾಗಿದ್ದವರನ್ನು ರಕ್ಷಿಸಿ ಮಾನವೀಯತೆ ಮೆರೆದ ಶಾಸಕರ ಜನಪರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಶಾಸಕ ರಾಮಪ್ಪ ದಾವಣಗೆರೆ ಜಿಲ್ಲೆ ಹರಿಹರ ಕ್ಷೇತ್ರದ ಜನಪ್ರತಿನಿಧಿಯಾಗಿದ್ದಾರೆ. ರಾತ್ರಿ ನಡೆದಿದ್ದ ಘಟನೆಯಲ್ಲಿ ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ.
 
ಹರಿಹರದ ವಿದ್ಯಾನಗರ ರಸ್ತೆಯಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತವಾಗಿತ್ತು. ಈ ವೇಳೆ ಬೈಕ್ ನಲ್ಲಿದ್ದ ದಂಪತಿ ರಕ್ತದ  ಮಡುವಿನಲ್ಲಿ ಬಿದ್ದಿದ್ದರು. ಲಿಂಗರಾಜ್ ಮತ್ತು ಪತ್ನಿ ಇಬ್ಬರಿಗೂ ತೀವ್ರ ಗಾಯಗಳಾಗಿದ್ದವು.
ಈ ವೇಳೆ ಅದೇ ದಾರಿಯಲ್ಲಿ ಬರುತ್ತಿದ್ದ ಶಾಸಕ ರಾಮಪ್ಪ, ಕೂಡಲೇ ತಮ್ಮ ಕಾರಿನಲ್ಲಿ  ಗಾಯಾಳುಗಳನ್ನ  ದಾವಣಗೆರೆ ಆಸ್ಪತ್ರೆಗೆ ಸಾಗಿಸಿದರು.

ಈ ಹಿಂದೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಳುಗಳನ್ನು ಸ್ವಂತ ಕಾರಿನಲ್ಲಿ ಆಸ್ಪತ್ರೆ ಗೆ ಸಾಗಿಸಿದ್ದರು ರಾಮಪ್ಪ.
ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಿಂಗರಾಜ್ ಪತ್ನಿ ಅಪಾಯದಿಂದ ಪಾರಾಗಿದ್ದಾರೆ.
ಹರಿಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನಾನು ಜೆಡಿಎಸ್‌ನ ಪ್ರಬಲ ಟಿಕೆಟ್ ಆಕಾಂಕ್ಷಿ ಎಂದ ಮಾಜಿ ಶಾಸಕಿ

ಮಂಡ್ಯ ಲೋಕಸಭೆ ಉಪ ಚುನಾವಣೆಯಲ್ಲಿ ನಾನು ಜೆಡಿಎಸ್ ನ ಟಿಕೆಟ್ ನ ಆಕಾಂಕ್ಷಿಯಾಗಿದ್ದೇನೆ. ಹೀಗಂತ ಮಾಜಿ ಶಾಸಕಿ ...

news

ಜಾತ್ಯಾತೀತ ಪಕ್ಷಗಳ ರಾಜ್ಯ ಸರ್ಕಾರ ಸುಭದ್ರವಾಗಿದೆ ಎಂದ ಸಚಿವ

ಜಾತ್ಯಾತೀತ ಪಕ್ಷಗಳ ರಾಜ್ಯ ಸರ್ಕಾರ ಸುಭದ್ರವಾಗಿದೆ ಎಂದು ಸಚಿವ ಹೇಳಿದ್ದಾರೆ.

news

ನವರಾತ್ರಿಗಾಗಿ ನರ್ತಿಸಿದ ವಿದ್ಯಾರ್ಥಿನಿಯರು

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿಯೂ ಸಡಗರ ಹಾಗೂ ಸಂಭ್ರಮದಿಂದ ನವರಾತ್ರಿ ಉತ್ಸವ ಆಚರಣೆ ಮಾಡಲಾಗುತ್ತಿದೆ.

news

ಮೀಟೂ ಅಭಿಯಾನಕ್ಕೆ ಕಾನೂನು ಬೆಂಬಲ ನೀಡಲು ಮುಂದಾದ ಕೇಂದ್ರ ಸರಕಾರ

ನವದೆಹಲಿ : ಮಹಿಳೆಯರು ತಮ್ಮ ಜೀವನದಲ್ಲಿ ನಡೆದ ಲೈಂಗಿಕ ಕಿರುಕುಳದ ಘಟನೆಗಳನ್ನು ಬಹಿರಂಗಪಡಿಸುವ ಸಲುವಾಗಿ ...

Widgets Magazine