ಉತ್ತರ ಕರ್ನಾಟಕ ಕೆಲವೆಡೆ ಮಳೆ ನಿರಂತರವಾಗಿ ಸುರಿಯುತ್ತಿದ್ದರೆ, ಮತ್ತೊಂದು ಕಡೆ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗಿದೆ.ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಪುಟಪಾಕ ಗ್ರಾಮದಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಜನರು ಹಾಗೂ ಜಾನುವಾರುಗಳು ಕುಡಿಯುವ ನೀರಿಗಾಗಿ ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಕರ್ನಾಟಕದ ಗಡಿಯಲ್ಲಿರುವ ಪುಟಪಾಕ ಗ್ರಾಮ ತೆಲಂಗಾಣ ರಾಜ್ಯದ ವಾಣಿಜ್ಯ ಪಟ್ಟಣ ನಾರಾಯಣಪೇಟಕ್ಕೆ ಹೋಗುವ ಹೆದ್ದಾರಿಯಲ್ಲಿದೆ. ಗುರುಮಠಕಲ್ನಿಂದ 10 ಕಿ.ಮೀ ದೂರದಲ್ಲಿದೆ. ಈ ಬಾರಿಯ ಮುಂಗಾರು ಇನ್ನೂ