ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಹೂಗಳಿಗೆ ಭಾರಿ ಬೇಡಿಕೆ ಕುದುರಿದೆ. ಶ್ರಾವಣ ಮಾಸದಲ್ಲಿ ನಾಗರ ಪಂಚಮಿ, ವರಮಹಾಲಕ್ಷ್ಮೀ ಪೂಜೆ, ಕೃಷ್ಣ ಅಷ್ಟಮಿ, ಗಣೇಶ ಚತುರ್ಥಿ ಹೀಗೆ ಸಾಲು ಸಾಲು ಹಬ್ಬಗಳು ಇರುವುದರಿಂದ ಜನರು ಹೂ ಖರೀದಿಗೆ ಮುಗಿಬಿದ್ದಿದ್ದಾರೆ.