ನಾಳೆಯಿಂದ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಹಿನ್ನೆಲೆ ಲಕ್ಷ್ಮಿ ಹೆಬ್ಬಾಳ್ಕರ್ ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದ್ದಾರೆ.ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಹತ್ವದ ನಿರ್ಧಾರ ಆಗಿದೆ.ನಮ್ಮ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆ ಗೃಹ ಲಕ್ಷ್ಮಿ ಯೋಜನೆ.ಮನೆಯ ಯಜಮಾನಿ ಶಕ್ತಿಶಾಲಿಯಾಗ್ತಾಳೆ ಆಗ ಸಮಾಜದ ಶಕ್ತಿ ವೃದ್ದಿ ಆಗ್ತದೆ.ಬಿಪಿಎಲ್ ಕಾರ್ಡ್, ಅಂತ್ಯೋದಯ ಕಾರ್ಡ್ ನವರಿಗೆ ಈ ಯೋಜನೆ ಲಾಭ ಸಿಗುತ್ತದೆ.ನಾಳೆಯಿಂದ ಅರ್ಜಿ ಸಲ್ಲಿಸಬಹುದು.ಕೆಲವೊಂದು ಕಾರಣಗಳಿಂದ ಜೂನ್ ೧೬ ರಿಂದ ಅರ್ಜಿ ಸಲ್ಲಿಸಬಹುದು.ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಮೂಲಕ ಭೌತಿಕವಾಗಿ ಕೂಡ ಅರ್ಜಿ ಸಲ್ಲಿಸಬಹುದು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.