ಐಟಿ ಅಧಿಕಾರಿಗಳ ಮೇಲೆ ದಾಳಿ ವರದಿಯಲ್ಲಿ ಸತ್ಯಾಂಶವಿಲ್ಲ: ಆರ್.ಕೆ.ದತ್ತಾ

ಬೆಂಗಳೂರು, ಮಂಗಳವಾರ, 10 ಅಕ್ಟೋಬರ್ 2017 (14:07 IST)

ಐಟಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಸಿದ್ದತೆ ಕುರಿತ ವರದಿಯನ್ನು ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತಾ ತಳ್ಳಿಹಾಕಿದ್ದಾರೆ.
ಐಟಿ ಅಧಿಕಾರಿಗಳು ಕೇವಲ ಕಾಂಗ್ರೆಸ್ ನಾಯಕರ ನಿವಾಸಗಳ ಮೇಲೆ ದಾಳಿ ನಡೆಸುತ್ತಿರುವುದರಿಂದ ಸೇಡಿನ ಕ್ರಮವಾಗಿ ಎಸಿಬಿ ಐಟಿ ಅಧಿಕಾರಿಗಳ ಮೇಲೆ ದಾಳಿ ನಡೆಸಲು ಸಿದ್ದತೆ ನಡೆಸುತ್ತಿದೆ ಎನ್ನುವ ವರದಿಗಳು ತೀವ್ರ ಕೋಲಾಹಲ ಸೃಷ್ಟಿಸಿದ್ದವು.
 
ಇಂದು ಐಟಿ ಇಲಾಖೆಯ ಮಹಾನಿರ್ದೇಶಕ ಬಾಲಕೃಷ್ಣ, ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತಾ ಅವರನ್ನು ಭೇಟಿ ಮಾಡಿ ವರದಿಗಳ ಬಗ್ಗೆ ಚರ್ಚೆ ನಡೆಸಿದರು ಎನ್ನಲಾಗಿದೆ.
 
ಐಟಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ನಡೆಸಿದಲ್ಲಿ ಉಭಯ ಇಲಾಖೆಗಳ ನಡುವಿನ ತಿಕ್ಕಾಟಕ್ಕೆ ಕಾರಣವಾಗಲಿದೆ ಎಂದು ಐಟಿ ಇಲಾಖೆಯ ಮಹಾನಿರ್ದೇಶಕ ಬಾಲಕೃಷ್ಣ ಕಳವಳ ವ್ಯಕ್ತಪಡಿಸಿದ್ದಾಗಿ ಮೂಲಗಳು ತಿಳಿಸಿವೆ. 
 
ಆದರೆ, ಐಟಿ ಅಧಿಕಾರಿಗಳ ಮೇಲೆ ದಾಳಿ ನಡೆಸುವಂತಹ ಯಾವುದೇ ಉದ್ದೇಶವಿಲ್ಲ. ವರದಿಗಳು ಕೇವಲ ಉಹಾಪೋಹಗಳು ಎಂದು ದತ್ತಾ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತಾ ಅವರೊಂದಿಗೆ ನಡೆಸಿದ ಚರ್ಚೆಯ ಬಗ್ಗೆ ಬಾಲಕೃಷ್ಣ, ಗೃಹ ಸಚಿವಾಲಯಕ್ಕೆ ಮಾಹಿತಿ ರವಾನಿಸಿದ್ದಾರೆ. ಮತ್ತೊಂದೆಡೆ ಆರ್.ಕೆ.ದತ್ತಾ ಕೂಡಾ ಬಾಲಕೃಷ್ಣ ಅವರೊಂದಿಗೆ ನಡೆಸಿದ ಚರ್ಚೆಯ ಬಗ್ಗೆ ಸಿಎಂ ಕಚೇರಿಗೆ ಮಾಹಿತಿ ಕಳುಹಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಆದಾಯ ತೆರಿಗೆ ಇಲಾಖೆ ದಾಳಿ ಭ್ರಷ್ಟಾಚಾರ ನಿಗ್ರಹ ದಳ ಸಿಎಂ ಸಿದ್ದರಾಮಯ್ಯ Acb It Official Cm Siddaramaiah

ಸುದ್ದಿಗಳು

news

ಬಿಜೆಪಿ ಕಚೇರಿಯಲ್ಲಿ ಮೂರು ಸಜೀವ ಬಾಂಬ್ ಪತ್ತೆ

ಕಣ್ಣೂರು: ಕೇರಳದ ಕಣ್ಣೂರುನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮೂರು ಸಜೀವ ಬಾಂಬ್‌ಗಳು ಪತ್ತೆಯಾಗಿದ್ದು ...

news

ರಾಹುಲ್ ಗಾಂಧಿ ಕ್ಷೇತ್ರದಲ್ಲಿ ಅಮಿತ್ ಷಾ, ಸ್ಮೃತಿ ಇರಾನಿ ಪ್ರವಾಸ

ಉತ್ತರ ಪ್ರದೇಶ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಮೇಥಿ ಲೋಕಸಭಾ ಕ್ಷೇತ್ರ ಪ್ರವಾಸ ಮುಗಿಸಿ ವಾಪಸ್ ...

news

ಭೂ ಹಗರಣ ಆರೋಪ: ಪುಟ್ಟಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆಗೆ ಸಿಎಂ ಪುತ್ರ ಸಿದ್ದತೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 300 ಕೋಟಿ ಮೌಲ್ಯದ ಭೂ ಹಗರಣ ಮಾಡಿದ್ದಾರೆ ಎಂದು ಆರೋಪಿಸಿರುವ ...

news

ಸಿಎಂ ಸಿದ್ದರಾಮಯ್ಯರಿಂದ 300 ಕೋಟಿ ಭೂಹಗರಣ: ಬಿ.ಜಿ.ಪುಟ್ಟಸ್ವಾಮಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಭೂಸ್ವಾಧೀನದಿಂದ 300 ಕೋಟಿ ಮೌಲ್ಯದ ಭೂಮಿಯನ್ನು ಕೈಬಿಟ್ಟಿದ್ದಾರೆ ಎಂದು ...

Widgets Magazine
Widgets Magazine