ಕುಡಿಯುವ ನೀರಿನ ಸಮಸ್ಯೆ: ಪಂಚಾಯಿತಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ಗದಗ, ಶುಕ್ರವಾರ, 14 ಸೆಪ್ಟಂಬರ್ 2018 (16:46 IST)

ಕುಡಿಯುವ ನೀರಿಗಾಗಿ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಖಾಲಿ ಕೊಡ ಹಿಡಿದು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಜನರು ಪ್ರತಿಭಟನೆ ಮಾಡಿದ್ದಾರೆ.

ಗದಗ ಜಿಲ್ಲೆಯ ಶಿರಹಟ್ಟಿ‌ ತಾಲೂಕಿನ ಮಹಾಲಿಂಗಪುರ ಗ್ರಾಮಸ್ಥರು ಕುಡಿಯುವ ನೀರು ಸಮರ್ಪಕ ಪೂರೈಕೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಸೊರಟೂರು ಗ್ರಾಮ ಪಂಚಾಯತಿ ಮುಂದೆ ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದ ನೂರಾರು ಮಹಿಳೆಯರು ಗ್ರಾಮ ಪಂಚಾಯತಿ ಕಚೇರಿಗೆ ಮುತ್ತಿಗೆ ಹಾಕಿದರು.

ಮಹಾಲಿಂಗಪುರದ ಸೊರಟೂರ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡಲಿದ್ದು, ಕುಡಿಯುವ ನೀರಿನ ಸಮಸ್ಯೆಯನ್ನು ಜನರು ಎದುರಿಸುತ್ತಿದ್ದಾರೆ. ಪ್ರತಿಭಟನೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲಿಸ್ ಸಿಬ್ಬಂದಿ ದೌಡಾಯಿಸಿದ್ದಾರೆ. ಪ್ರತಿಭಟನಾಕಾರರನ್ನ ಮನವೊಲಿಸುವಲ್ಲಿ ಪ್ರಯತ್ನ ನಡೆಸಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನೂರಕ್ಕೆ ನೂರರಷ್ಟು ಸರಕಾರ ಭದ್ರ ಎಂದ ಮಾಜಿ ಸಿಎಂ

ಹೆಚ್.ಡಿ. ಕುಮಾರಸ್ವಾಮಿಯವರನ್ನ 5 ವರ್ಷ ಸಿಎಂ ಆಗಿರಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಐದು ವರ್ಷ ...

news

ಶಾಸಕ ಸತೀಶ್ ಜಾರಕಿಹೊಳಿ ಹೇಳ್ತಿರೋದೇನು ಗೊತ್ತಾ?

ಕಾಂಗ್ರೆಸ್ ಹೈಕಮಾಂಡ್ ನಿಂದ ಜಾರಕಿಹೊಳಿ ಸಹೋದರರಿಗೆ ವಾರ್ನಿಂಗ್ ವಿಚಾರ ಬೆಳಗಾವಿಯಲ್ಲಿ ಶಾಸಕ ಸತೀಶ್ ...

news

ಕಲುಷಿತ ನೀರು ಸರಬರಾಜು ಮಾಡುತ್ತಿರುವ ಪುರಸಭೆ ವಿರುದ್ಧ ಆಕ್ರೋಶ

ಒಂದೆಡೆ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಎದುರಾಗಿದೆ. ಇನ್ನೊಂದು ಕಡೆ ಕಲುಷಿತ ನೀರನ್ನು ಸರಬರಾಜು ...

news

ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ ಎಂದ ಶಾಸಕ

ಬಿಜೆಪಿಯಲ್ಲಿ ನಾನು ನಿಷ್ಠಾವಂತ ಕಾರ್ಯಕರ್ತನಾಗಿದ್ದೇನೆ. ಯಾವ ಜೆಡಿಎಸ್ ನಾಯಕರೂ ನನ್ನನ್ನು ಸಂಪರ್ಕಿಸಿಲ್ಲ. ...

Widgets Magazine