ಎಚ್.ವಿಶ್ವನಾಥ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲ್ಲ: ಎಚ್.ಎಂ.ರೇವಣ್ಣ

ಬೆಂಗಳೂರು, ಗುರುವಾರ, 4 ಮೇ 2017 (21:02 IST)

Widgets Magazine

ಹಿರಿಯ ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನುವ ವರದಿಗಳಲ್ಲಿ ಸತ್ಯಾಂಶವಿಲ್ಲ ಎಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ಹೇಳಿದ್ದಾರೆ. 
 
ಕಾಂಗ್ರೆಸ್‌ ಪಕ್ಷಕ್ಕೆ ವಿಶ್ವನಾಥ್ ಅವರ ಮಾರ್ಗದರ್ಶನ ಅಗತ್ಯವಾಗಿರುವುದರಿಂದ ಕಾಂಗ್ರೆಸ್ ಪಕ್ಷದಲ್ಲಿಯೇ ಮುಂದುವರಿಯುತ್ತಾರೆ ಎಂದು ತಿಳಿಸಿದ್ದಾರೆ.
 
ವಿಶ್ವನಾಥ್ ಅವರೊಂದಿಗೆ ಹಿರಿಯ ಕಾಂಗ್ರೆಸ್ ಮುಖಂಡರು ಮಾತುಕತೆ ನಡೆಸಿದ್ದಾರೆ. ಮಾತುಕತೆ ಫಲಪ್ರದವಾಗಿದ್ದು ಕಾಂಗ್ರೆಸ್ ತೊರೆದು ಹೋಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.
 
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಶಾಸಕರ ಅಧ್ಯಯನ ವಿದೇಶ ಪ್ರವಾಸಕ್ಕೆ ಬ್ರೇಕ್: ಕೋಳಿವಾಡ

ಬೆಂಗಳೂರು: ಅಧ್ಯಯನಕ್ಕಾಗಿ ವಿದೇಶ ಪ್ರವಾಸಕ್ಕೆ ತೆರಳಲು ಸಜ್ಜಾಗಿದ್ದ ಶಾಸಕರ ಪ್ರವಾಸಕ್ಕೆ ಬ್ರೇಕ್ ...

news

ಜೆಡಿಎಸ್‌ನೊಂದಿಗೆ ಯಾವುದೇ ಮೈತ್ರಿಯಿಲ್ಲ: ಸಿಎಂ ಸ್ಪಷ್ಟನೆ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿಯಾಗುವುದಿಲ್ಲ ಎಂದು ಸಿಎಂ ...

news

ಯಡಿಯೂರಪ್ಪಗೆ ಸೆಡ್ಡು ಹೊಡೆಯಲು ಈಶ್ವರಪ್ಪ ಮಾಸ್ಟರ್ ಪ್ಲಾನ್

ಬೆಂಗಳೂರು: ಪ್ರಧಾನಿ ಮೋದಿಯವರ ಕಾರ್ಯಕ್ರಮಗಳನ್ನು ರಾಯಣ್ಣ ಬ್ರಿಗೇಡ್ ಮೂಲಕ ಅಹಿಂದ ವರ್ಗಗಳ ತಲುಪಿಸಿ ...

news

ಸರಕಾರಿ ಭೂಮಿ ನುಂಗಿದ್ರಾ ಸಚಿವ ಎಂ.ಕೃಷ್ಣಪ್ಪ.....?

ಬೆಂಗಳೂರು: ರಾಜ್ಯದ ವಸತಿ ಖಾತೆ ಸಚಿವ ಎಂ.ಕೃಷ್ಣಪ್ಪ ಸರಕಾರದ 350 ಕೋಟಿ ಮೌಲ್ಯದ ಭೂಮಿಯನ್ನು ಕಬಳಿಕೆ ...

Widgets Magazine