ಬೆಳಗಾವಿ : ಪಂಚಮಸಾಲಿ ಸಮಾಜಕ್ಕೆ 2D ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿ ನಡೆಸುತ್ತಿರುವ ಹೋರಾಟಕ್ಕೆ ಕೊನೆಗೂ ಸರ್ಕಾರ ಮಣಿದಿದೆ. ಮೀಸಲಾತಿ ಕೆಟಗರಿಯಲ್ಲಿ ಹಲವು ಬದಲಾವಣೆಯೊಂದಿಗೆ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕಲ್ಪಿಸಲು ಸರ್ಕಾರ ಮುಂದಾಗಿದೆ.2ಅ ಮತ್ತು 2ಆ ಎಂಬ ಎರಡು ಪ್ರತ್ಯೇಕ ಪ್ರವರ್ಗ ರಚನೆಗೆ ಸಂಪುಟದಲ್ಲಿ ನಿರ್ಧಾರಿಸಲಾಗಿದೆ. ಅದರಲ್ಲಿ 2ಆ ಪ್ರವರ್ಗಕ್ಕೆ ಪಂಚಮಸಾಲಿ ಸಮುದಾಯವನ್ನು ಸೇರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಮೀಸಲಾತಿ ಪ್ರಮಾಣ ಇನ್ನೂ ನಿಗದಿ