ಬಿಜೆಪಿಯವರಂತೆ ಸಿಬಿಐ ಪ್ರಾಮಾಣಿಕತೆ ನಾವು ಪ್ರಶ್ನಿಸೋಲ್ಲ: ಸಿಎಂ

ಬಳ್ಳಾರಿ, ಮಂಗಳವಾರ, 12 ಸೆಪ್ಟಂಬರ್ 2017 (16:53 IST)

ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಅಧಿಕಾರದಲ್ಲಿದ್ದಾಗ ವಿಪಕ್ಷದಲ್ಲಿದ್ದ ಬಿಜೆಪಿ, ಸಿಬಿಐ ಪ್ರಾಮಾಣಿಕತೆಯನ್ನು ಪ್ರಶ್ನಿಸಿತ್ತು. ಆದರೆ. ನಾವು ಅವರಂತೆ ಸಿಬಿಐ ಪ್ರಾಮಾಣಿಕತೆಯನ್ನು ಪ್ರಶ್ನಿಸುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಬಳ್ಳಾರಿಯಲ್ಲಿ ಸಮಾವೇಶದ ನಂತರ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆಯ ಪ್ರಕರಣವನ್ನು ಸಿಬಿಐಗೆ ಕೊಡಲು ಯಾವುದೇ ಅಭ್ಯಂತರವಿಲ್ಲ ಎಂದರು 
 
ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣ ಸೇರಿದಂತೆ ಅನೇಕ ಪ್ರಕರಣಗಳನ್ನು ಸಿಬಿಐ ತನಿಖೆ ಮಾಡುತ್ತಿದ್ದರೂ ಪ್ರಗತಿಯಾಗಿಲ್ಲ. ಪ್ರಕರಣ ಸಿಬಿಐಗೆ ಕೊಡಲು ಸರಕಾರ ಸಿದ್ದವಿದೆ. ಆದರೆ, ಗೌರಿ ಕುಟುಂಬದವರು ಸಿಬಿಐ ತನಿಖೆಗೆ ಕೋರಿಲ್ಲ ಎಂದರು.
 
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ ನಡೆಸುತ್ತಿದೆ. ತನಿಖೆ ಅಂತಿಮ ಘಟ್ಟದಲ್ಲಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನಾನು ನೋಡಿದ್ದನ್ನ, ಕೇಳಿದ್ದನ್ನ ಹೇಳಿದ್ದೇನೆ: ಎಂ.ಬಿ. ಪಾಟೀಲ್ ಪ್ರತಿಕ್ರಿಯೆ

ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಸಿದ್ದಗಂಗಾ ಶ್ರೀಗಳ ಬೆಂಬಲವಿದೆ. ಶ್ರೀಗಳ ನನ್ನ ಜೊತೆ ಹೇಳಿದ್ದಾರೆಂದು ...

news

ರಾಹುಲ್ ಗಾಂಧಿ ವಿರುದ್ಧ ಸ್ಮೃತಿ ಇರಾನಿ ವಾಗ್ದಾಳಿ

ನವದೆಹಲಿ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಭಾಷಣ ದೇಶದಲ್ಲಿ ಯಾರು ಕೇಳುವುದಿಲ್ಲ. ಆದ್ದರಿಂದ ...

news

ಗೌರಿ ಹಂತಕರನ್ನ ಬಂಧಿಸಿ, ವಿಶ್ವಾಸ ಉಳಿಸಿಕೊಳ್ಳಿ: ಪ್ರತಿರೋಧ ಸಮಾವೇಶದಲ್ಲಿ ವಿಚಾರವಾದಿಗಳ ಆಗ್ರಹ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ಪ್ರಗತಿಪರರು, ವಿಚಾರವಾದಿಗಳು ಬೃಹತ್ ಪ್ರತಿರೋಧ ...

news

ಕಾಂಗ್ರೆಸ್ ಸರಕಾರ ಹಗಲು ದರೋಡೆಯಲ್ಲಿ ತೊಡಗಿದೆ: ಬಿಎಸ್‌ವೈ

ಬೆಂಗಳೂರು: ಕಾಂಗ್ರೆಸ್ ಸರಕಾರ ಹಗಲು ದರೋಡೆಯಲ್ಲಿ ತೊಡಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ...

Widgets Magazine