ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಕಲಬುರಗಿ ಜಿಲ್ಲೆಯಿಂದ ಇದೀಗ ಯಾದಗಿರಿಗೆ ಕೋವಿಡ್ -19 ಹರಡುತ್ತಾ ಅನ್ನೋ ಪ್ರಶ್ನೆಗಳು ಕೇಳಿಬರುತ್ತಿವೆ. ಕೋವಿಡ್-19 ಸೋಂಕಿತ ಕಲಬುರಗಿ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ ಎನ್ನಲಾದ ವ್ಯಕ್ತಿಯ ದ್ವಿತೀಯ ಸಂಪರ್ಕದಲ್ಲಿದ್ದ ಯಾದಗಿರಿ ಜಿಲ್ಲೆಯ ಇಬ್ಬರನ್ನು ಪತ್ತೆ ಹಚ್ಚಿದ್ದು, ಇವರಲ್ಲಿ ರೋಗದ ಗುಣಲಕ್ಷಣಗಳು ಇಲ್ಲದ ಕಾರಣ ಹೋಮ್ ಕ್ವಾರಂಟೈನ್ನಲ್ಲಿರಿಸಲಾಗಿದೆ. ಉಳಿದವರ ಪತ್ತೆ ಕಾರ್ಯ ತೀವ್ರಗತಿಯಲ್ಲಿ ನಡೆದಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಅವರು ತಿಳಿಸಿದ್ದಾರೆ.ಕಲಬುರಗಿ ನಗರದ ಕೋವಿಡ್-19,