Widgets Magazine

ರೈತರ ಸಾಲ ಮನ್ನಾ ಬಗ್ಗೆ ಬಿಎಸ್‌ವೈ ಏಕೆ ಪ್ರಧಾನಿಯನ್ನು ಕೇಳುತ್ತಿಲ್ಲ: ಮಧು ಬಂಗಾರಪ್ಪ

ಶಿವಮೊಗ್ಗ, ಗುರುವಾರ, 20 ಏಪ್ರಿಲ್ 2017 (15:46 IST)

Widgets Magazine

ರಾಜ್ಯದಾದ್ಯಂತ ಭೀಕರ ಬರಗಾಲ ತಾಂಡವವಾಡುತ್ತಿದ್ದರೂ ರೈತರ ಸಾಲ ಮನ್ನಾ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಏಕೆ ಪ್ರಧಾನಿ ಮೋದಿಯವರನ್ನು ಕೇಳುತ್ತಿಲ್ಲ ಎಂದು ಜೆಡಿಎಸ್ ಶಾಸಕ ಪ್ರಶ್ನಿಸಿದ್ದಾರೆ.
 
ಕೇಂದ್ರದಲ್ಲಿ ಬಿಜೆಪಿ ಸರಕಾರವಿರುವುದರಿಂದ ಮಾಜಿ ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿಯವರಿಗೆ ಬರ ಪರಿಸ್ಥಿತಿ ಬಗ್ಗೆ ಮನವರಿಕೆ ಮಾಡಿ ರೈತರ ಸಾಲ ಮನ್ನಾಗೊಳಿಸಲು ಪ್ರಯತ್ನಿಸದಿರುವುದು ನೋಡಿದಲ್ಲಿ ಬಿಜೆಪಿ ರೈತ ವಿರೋಧಿ ಎನ್ನುವುದು ಸಾಬೀತಾಗಿದೆ ಎಂದರು.
 
ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಿದಲ್ಲಿ ತಾವು ಸಾಲ ಮನ್ನಾ ಮಾಡುವುದಾಗಿ ಹೇಳುತ್ತಾರೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವಿನ ತಿಕ್ಕಾಟದಿಂದಾಗಿ ರೈತ ಕಂಗಾಲಾಗಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ರೈತರು ಇಂದಲ್ಲ ನಾಳೆ ಸಾಲ ಮನ್ನಾವಾಗುವುದು ಎನ್ನುವ ನಿರೀಕ್ಷೆಯಲ್ಲಿದ್ದಾರೆ. ಆದರೆ, ಉಭಯ ಸರಕಾರಗಳು ರೈತರೊಂದಿಗೆ ಚೆಲ್ಲಾಟವಾಡುತ್ತಿವೆ. ಮುಂಬರುವ ದಿನಗಳಲ್ಲಿ ಎರಡು ಪಕ್ಷಗಳಿಗೆ ರೈತರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪನಾಮಾ ಹಗರಣ: ಪಾಕ್ ಪ್ರಧಾನಿ ನವಾಜ್ ಷರೀಫ್‌ ವಿರುದ್ಧ ತನಿಖೆಗೆ ಆದೇಶ

ಇಸ್ಸಾಮಾಬಾದ್: ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ವಿದೇಶಗಳಲ್ಲಿ ಪನಾಮಾಗೇಟ್ ಪ್ರಕರಣದಲ್ಲಿ ...

news

ಕೆಪಿಸಿಸಿ ಅಧ್ಯಕ್ಷರ ಆಯ್ಕೆಗೆ ಹೈಕಮಾಂಡ್ ತೀರ್ಮಾನವೇ ಅಂತಿಮ: ಜಿ.ಪರಮೇಶ್ವರ್

ಬೆಂಗಳೂರು: ಮುಂದಿನ 2018ರ ಸಾಧಕ-ಬಾಧಕಗಳನ್ನು ಪರಿಶೀಲಿಸಿದ ನಂತರ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕುರಿತಂತೆ ...

news

ಮತ್ತೆ ಗರಿಗೆದರಿದ ರಾಯಣ್ಣ ಬ್ರಿಗೇಡ್ ಚಟುವಟಿಕೆ: ಬಿಎಸ್‌ವೈಗೆ ಈಶ್ವರಪ್ಪ ಸವಾಲ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಾರ್ಯನಿರ್ವಹಣೆಯಿಂದ ಅಸಮಾಧಾನಗೊಂಡಿರುವ ...

news

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಸ್‌.ಆರ್.ಪಾಟೀಲ್: ಸಿಎಂ ಸಿದ್ದರಾಮಯ್ಯ ಲಾಬಿ?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಸ್‌.ಆರ್.ಪಾಟೀಲ್ ಅವರನ್ನು ನೇಮಕ ಮಾಡುವ ಕುರಿತಂತೆ ಸಿಎಂ ...

Widgets Magazine Widgets Magazine