ಭ್ರಷ್ಟಾಚಾರ ಆರೋಪ ಸಾಬೀತಾದ್ರೆ ಜೈಲಿಗೆ ಹೋಗಲು ಸಿದ್ದ: ಜಿ.ಪರಮೇಶ್ವರ್

ಬೆಂಗಳೂರು, ಸೋಮವಾರ, 27 ನವೆಂಬರ್ 2017 (15:50 IST)

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರದ ಮೇಲಿನ ಭ್ರಷ್ಟಾಚಾರವನ್ನು ಬಿಜೆಪಿ ನಾಯಕರು ಕೋರ್ಟ್‌ನಲ್ಲಿ ಪ್ರಶ್ನಿಸಲಿ. ಒಂದು ವೇಳೆ, ಆರೋಪಗಳು ಸಾಬೀತಾದಲ್ಲಿ ಜೈಲಿಗೆ ಹೋಗಲು ಸಿದ್ದ ಎಂದು ಜಿ.ಪರಮೇಶ್ವರ್ ಸವಾಲ್ ಹಾಕಿದ್ದಾರೆ.
 
ಕಾಂಗ್ರೆಸ್ ಪಕ್ಷ ಆಯೋಜಿಸಿದ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಮಾಡಿದ ಆರೋಪಗಳು ನ್ಯಾಯಾಲಯದಲ್ಲಿ ಸಾಬೀತಾದಲ್ಲಿ ನಮ್ಮ ಪಕ್ಷದ ನಾಯಕರು ಜೈಲಿಗೆ ಹೋಗಲು ಸಿದ್ದರಿದ್ದಾರೆ. ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಬಿಜೆಪಿ ನಾಯಕರು ಮಾಡಿರುವ ಆರೋಪಗಳಿಗೆ ರಾಜ್ಯದ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ. ಕಳೆದ 2013ರಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯನ್ನು ಈಡೇರಿಸಿದೆ. ಜನತೆಯ ಆಶೋತ್ತರಗಳನ್ನು ಈಡೇರಿಸಿದ್ದರಿಂದ 2018ರಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 
ರಾಜ್ಯದ ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ಮಾತನಾಡಿ, ಬಿಜೆಪಿಯ ಪರಿವರ್ತನಾ ಯಾತ್ರೆ ಮೊದಲ ದಿನವೇ ಪಂಕ್ಚರ್ ಆಗಿದೆ. ಇದೀಗ ಬಿಜೆಪಿ ಅಂತರಿಕ ಬಿಕ್ಕಟ್ಟುಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದೆ. ಪರಿವರ್ತನಾ ಯಾತ್ರೆ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರನ್ನು ಟೀಕಿಸಲು ಮಾತ್ರ ಸೀಮಿತವಾಗಿದೆ ಎಂದು ಲೇವಡಿ ಮಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಬಿಜೆಪಿ ಭ್ರಷ್ಟಾಚಾರ ಕೋರ್ಟ್ Bjp Corruption Court Kpcc Chief Dr G Parameshwara

ಸುದ್ದಿಗಳು

news

ಜಯಲಲಿತಾ ಮಗಳೆಂದು ಹೇಳಿಕೊಂಡ ಮಹಿಳೆಯ ಅರ್ಜಿ ತಿರಸ್ಕರಿಸಿದ ಸುಪ್ರೀಂ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಮಗಳೆಂದು ಹೇಳಿಕೊಂಡು ಸುಪ್ರೀಂಕೋರ್ಟಿನ ...

news

ಅಧಿಕೃತವಾಗಿ ರಾಜಕೀಯಕ್ಕೆ ದುಮುಕಿದ ಪ್ರಜ್ವಲ ರೇವಣ್ಣ

ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ ರೇವಣ್ಣ ಅವರನ್ನು ಜೆಡಿಎಸ್ ರಾಜ್ಯ ಪ್ರಧಾನ ...

news

ಬಸನಗೌಡ ಪಾಟೀಲ ಯತ್ನಾಳರೊಂದಿಗೆ ಯಡಿಯೂರಪ್ಪ ಗೌಪ್ಯ ಮಾತುಕತೆ

ಬಿಜೆಪಿ ಉಚ್ಚಾಟನೆಗೊಂಡಿರುವ ವಿಧಾನ ಪರಿಷತ್ ಸದಸ್ಯ ಬಸನಗೌಡ ಪಾಟೀಳ ಯತ್ನಾಳ ಅವರೊಂದಿಗೆ ರಾಜ್ಯಾಧ್ಯಕ್ಷ ...

news

‘ಬೇಕಾದಂತೆ ತನಿಖೆ ನಡೆಸಲು ಸಿಎಂ, ಕೆಂಪಯ್ಯರನ್ನು ಇಟ್ಟುಕೊಂಡಿದ್ದಾರೆ’

ಬೆಂಗಳೂರು: ಯೋಗೀಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿನಯ್ ಕುಲಕರ್ಣಿ ವಿರುದ್ಧ ಆರೋಪಗಳು ...

Widgets Magazine