ಯಾತ್ರೆಯ ನಂತ್ರ ಯಡಿಯೂರಪ್ಪ ಮಾನಸಿಕವಾಗಿ ಕುಗ್ಗಲಿದ್ದಾರೆ: ಜಾರಕಿಹೊಳಿ

ಬೆಳಗಾವಿ, ಭಾನುವಾರ, 3 ಡಿಸೆಂಬರ್ 2017 (15:20 IST)

ಬಿಜೆಪಿ ಪರಿವರ್ತನಾ ಯಾತ್ರೆಯ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಮಾನಸಿಕವಾಗಿ ಕುಗ್ಗಿಹೋಗಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪರಿವರ್ತನಾ ಯಾತ್ರೆ ಫ್ಲಾಪ್ ಶೋದಿಂದಾಗಿ ಯಡಿಯೂರಪ್ಪ ತುಂಬಾ ಚಿಂತಿತರಾಗಿದ್ದಾರೆ. ನಿನ್ನೆ ಇಂಡಿ ಪಟ್ಟಣದಲ್ಲಿ ನಡೆದ ಘಟನೆ ಅವರಿಗೆ ಅಸಮಾಧಾನ ಮೂಡಿಸಿದೆ ಎಂದು ತಿಳಿಸಿದ್ದಾರೆ.
 
ಬೆಳಗಾವಿ ಜಿಲ್ಲೆಯಲ್ಲಿ 10 ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿದ್ದಾರೆ. ಇಲ್ಲವಾದಲ್ಲಿ ರಾಜಕೀಯ ಸನ್ಯಾಸ ತೆಗೆದುಕೊಳ್ಳುತ್ತೇನೆ ಎಂದು ಸವಾಲ್ ಹಾಕಿದರು.
 
ಮುಂದಿನ ಬಾರಿಯೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಸಿಎಂ ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಂಸದ ಪ್ರತಾಪ್ ಸಿಂಹ ಕಿತಾಪತಿ: ಮಹಿಳಾ ಪೊಲೀಸ್ ಅಧಿಕಾರಿ ಪ್ರಾಣಾಪಾಯದಿಂದ ಪಾರು

ಹುಣಸೂರು: ಹನುಮ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಬಿಳಿಕೆರೆ ಗ್ರಾಮಕ್ಕೆ ಆಗಮಿಸುತ್ತಿದ್ದ ಬಿಜೆಪಿ ಸಂಸದ ...

news

ಅತ್ತಿಗೆಗೆ ಅಶ್ಲೀಲ ವಿಡಿಯೋ ತೋರಿಸಿ ಯಾರಿಲ್ಲ ಬಾ ಅಂದ...!

ಇಂಧೋರ್: ಅತ್ತಿಗೆ ತಾಯಿಯ ಸಮಾನ ಎನ್ನುತ್ತಾರೆ. ಆದರೆ, ಇಲ್ಲೊಬ್ಬ ಅತ್ತಿಗೆಗೆ ಅಶ್ಲೀಲ ವಿಡಿಯೋ ತೋರಿಸಿ ...

news

ಪ್ರೀತಿಸಿ ವಿವಾಹವಾದ ತಿಂಗಳಿಗೆ ಜೋಡಿ ಸಾವು

ಮನೆಯವರ ವಿರೋಧದ ನಡುವೆಯೂ ಪ್ರೀತಿಸಿ ವಿವಾಹ ಮಾಡಿಕೊಂಡಿದ್ದ ಜೋಡಿಯೂ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ...

news

ರಾಜ್ಯ ಬಿಜೆಪಿ ನಾಯಕರಿಗೆ ಶಾಕ್ ಮೂಡಿಸಿದ ಹೈಕಮಾಂಡ್ ತಂತ್ರ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತಾವೇ ಸರ್ವಸ್ವ, ಸರ್ವೋಚ್ಚ ನಾಯಕ ಎಂದು ಬೀಗುತ್ತಿದ್ದ ಬಿಜೆಪಿ ನಾಯಕರಿಗೆ ...

Widgets Magazine
Widgets Magazine