ಉ.ಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪದಗ್ರಹಣ

ಲಕ್ನೋ:, ಭಾನುವಾರ, 19 ಮಾರ್ಚ್ 2017 (14:23 IST)

Widgets Magazine

ಬಿಜೆಪಿ ಮುಖಂಡ ಯೋಗಿ ಆದಿತ್ಯನಾಥ ಇಂದು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
 
ಕಾನ್ಶಿರಾಮ್ ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಉತ್ತರಪ್ರದೇಶದ ರಾಜ್ಯಪಾಲ ರಾಮ್‌ ನಾಯಕ್, ನೂತನ ಸಿಎಂ ಆದಿತ್ಯನಾಥ್ ಹಾಗೂ ಅವರ ಸಚಿವ ಸಂಪುಟಕ್ಕೆ ಪ್ರಮಾಣ ವಚನ ಬೋಧಿಸಿದರು.  
 
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ದಿನೇಶ್ ಶರ್ಮಾ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
 
ಗೋರಖ್‌ಪುರ್‌ ಲೋಕಸಭಾ ಕ್ಷೇತ್ರದಿಂದ ಐದು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಯೋಗಿ ಆದಿತ್ಯನಾಥ್ ಅವರನ್ನು ನಿನ್ನೆ ಸಂಜೆ ಅವಿರೋಧವಾಗಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿತ್ತು. ತದನಂತರ ಯೋಗಿ ಆದಿತ್ಯನಾಥ್ ರಾಜ್ಯಪಾಲರನ್ನು ಭೇಟಿಯಾಗಿ ಸರಕಾರ ರಚಿಸಲು ಆಹ್ವಾನ ನೀಡುವಂತೆ ಕೋರಿದ್ದರು. 
 
ರಾಜಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯೋಗಿ ಆದಿತ್ಯನಾಥ್, ಪ್ರಧಾನಮಂತ್ರಿಯವರ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಘೋಷಣೆಯನ್ನು ಪಾಲಿಸುವುದಾಗಿ ತಿಳಿಸಿದ್ದಾರೆ.
 
ಸಮಾರಂಭದಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಬಿಜೆಪಿ ಅಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನಾಳೆ ದೆಹಲಿಗೆ ತೆರಳಲಿರುವ ಎಸ್‌.ಎಂ.ಕೃಷ್ಣ: ಅಮಿತ್ ಶಾರೊಂದಿಗೆ ಚರ್ಚೆ

ಬೆಂಗಳೂರು: ನಾಳೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ನವದೆಹಲಿಗೆ ತೆರಳುತ್ತಿದ್ದು ಬಿಜೆಪಿ ಪಕ್ಷದ ರಾಷ್ಟ್ರೀಯ ...

news

ನಾಲಿಗೆ, ಮರ್ಮಾಂಗ ಕಚಕ್ ಪ್ರಕರಣಕ್ಕೆ ಹೊಸ ಟ್ವಿಸ್ಟ್

ಬೆಂಗಳೂರು: ನಾಲಿಗೆ, ಮರ್ಮಾಂಗಕ್ಕೆ ಕತ್ತರಿ ಹಾಕಲಾದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದೆ. ನಾಲಿಗೆ ...

news

ಉಪಚುನಾವಣೆಗಾಗಿ ಮತದಾರರ ಪಡಿತರ ಚೀಟಿ ಪಡೆದು ಹಣ ಹಂಚಿಕೆ: ಬಿಎಸ್‌ವೈ

ಬೆಂಗಳೂರು: ಉಪಚುನಾವಣೆಗಾಗಿ ಮತದಾರರ ಪಡಿತರ ಚೀಟಿ ಪಡೆದು ಹಣ ಹಂಚಿಕೆ ಮಾಡಲಾಗುತ್ತಿದೆ. ಸರಕಾರದ ಹೇಯ ...

news

ತ್ರಿವಳಿ ತಲಾಕ್‌ ನಿಷೇಧಿಸುವಂತೆ ಪ್ರಧಾನಿ ಮೋದಿಗೆ ಮುಸ್ಲಿಂ ಮಹಿಳಾ ವಕೀಲರ ಮನವಿ

ನವದೆಹಲಿ: ತ್ರಿವಳಿ ತಲಾಕ್ ನಿಷೇಧಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮುಸ್ಲಿಂ ಸಮುದಾಯದ ಮಹಿಳಾ ...

Widgets Magazine