ನಡುಮಲೆ ಪ್ರಕೃತಿ ಸೌಂದರ್ಯದ 'ಮಲೆಮಹದೇಶ್ವರ ಬೆಟ್ಟ'

ಚೆನ್ನೈ, ಶನಿವಾರ, 22 ನವೆಂಬರ್ 2014 (14:16 IST)

ದಕ್ಷಿಣ ಕರ್ನಾಟಕದಲ್ಲಿ ಪೂರ್ವ ಘಟ್ಟಗಳ ಉತ್ತುಂಗ ಶಿಖರಗಳಲ್ಲೊಂದಾದ ಮಲೆ ಮಹದೇಶ್ವರ ಬೆಟ್ಟ, ನಿಸರ್ಗದ ಮಡಿಲಲ್ಲಿ ನೆಲೆಗೊಂಡಿರುವ ಪ್ರಮುಖ ಪುಣ್ಯಕ್ಷೇತ್ರವಾಗಿದೆ. ಕರ್ನಾಟಕದಲ್ಲಿ ಪ್ರಸಿದ್ಧ ಯಾತ್ರಾ ಸ್ಥಳವಾಗಿದೆ. ಸುತ್ತಮುತ್ತ ದಟ್ಟ ಅರಣ್ಯದ ಮಧ್ಯೆ ಸುಮಾರು 3ಸಾವಿರ ಅಡಿ ಎತ್ತರದ ನಡುಮಲೆಯಲ್ಲಿ ಪ್ರಶಾಂತ ಪರಿಸರದಲ್ಲಿ ಶ್ರೀಕ್ಷೇತ್ರ ಸೌಂದರ್ಯೋಪಾಸನೆ ದೃಷ್ಟಿಯಿಂದಲೂ ಪ್ರಮುಖ ಸ್ಥಳವಾಗಿದೆ.
 
ಕೊಳ್ಳೇಗಾಲದಿಂದ ಮಧುವನಹಳ್ಳಿ, ಸಿಂಗಾನಲ್ಲೂರು, ಹನೂರು ಮಾರ್ಗವಾಗಿ ಕೌದಳ್ಳಿ ತಲುಪಿದರೆ, ಅಲ್ಲಿಂದ ಬೆಟ್ಟಕ್ಕೆ 16ಕಿ.ಮೀ.ಕಾಡುದಾರಿ. ಮುಂದೆ ತಾಳಬೆಟ್ಟ ಎಂಬ ಬೆಟ್ಟದ ತಪ್ಪಲು ಸಿಗುತ್ತದೆ. ಮಹದೇಶ್ವರನ ಭಕ್ತರಾಗಿದ್ದ ಶ್ರೀ ಜಯಚಾಮರಾಜ ಒಡೆಯರು ಮತ್ತು ಶ್ರೀಕೃಷ್ಣರಾಜ ಒಡೆಯರು ತಾಳಬೆಟ್ಟದಿಂದ ಕಾಲ್ನಡಿಗೆಯಲ್ಲೇ ಬೆಟ್ಟವೇರಿ ಮಾದಯ್ಯನ ದರ್ಶನ ಮಾಡುತ್ತಿದ್ದರಂತೆ.
 
ಶ್ರೀಮಲೆಮಹದೇಶ್ವರ ಉತ್ಸವ ಮಹಾಶಿವರಾತ್ರಿ, ದಸರಾ, ದೀಪಾವಳಿ, ಯುಗಾದಿ, ಕಾರ್ತಿಕ ಸೋಮವಾರ ಮತ್ತು ಪ್ರತಿ ತಿಂಗಳು ಕೃಷ್ಣ ಪಂಚಮಿ ಚತುದರ್ಶಿಯಲ್ಲಿ ವಿಶೇಷವಾಗಿ ಆಚರಿಸಲಾಗುತ್ತದೆ. ಹುಲಿವಾಹನ, ವೃಷಭ ವಾಹನ ಮತ್ತು ರುದ್ರಾಕ್ಷಿ ಮಂಟಪ ಉತ್ಸವಗಳು ಮನ ಸೆಳೆಯುತ್ತವೆ.
 
ಮಹದೇಶ್ವರರ ಭಕ್ತನಾದ ಶೇಷಣ್ಣ ಒಡೆಯರ ಉತ್ಸವ 12ವರ್ಷಗಳಿಗೊಮ್ಮೆ ಬಹಳ ವಿಜೃಂಭಣೆಯಿಂದ ಆಚರಿಸಲ್ಪಡುತ್ತದೆ. ಮತ್ತು ಉತ್ತರ ತಮಿಳುನಾಡಿನಿಂದ ಪ್ರತಿವರ್ಷ ಲಕ್ಷಾಂತರ ಭಕ್ತರು ಈ ಸ್ಥಳಕ್ಕೆ ಭೇಟಿ ನೀಡುತ್ತಾರೆ. ಇಲ್ಲಿ ದೇವಸ್ಥಾನದ ಅರ್ಚಕರನ್ನು ತಮ್ಮಡಿಗಳು ಎಂದು ಕರೆಯುತ್ತಾರೆ. ಇವರು ಲಿಂಗಗಳನ್ನು ಧರಿಸಿರುತ್ತಾರೆ. 
 
ಇವರು ಈ ಸ್ಥಳದ ಮೂಲ ನಿವಾಸಿಗಳಾಗಿದ್ದು, ಸೋಲಿಗ, ಜೇನುಕುರುಬ, ಕಾಡುಕುರುಬ ಮುಂತಾದ ಪಂಗಡಗಳಿಗೆ ಸೇರಿದವರಾಗಿದ್ದಾರೆ. ಮಹದೇಶ್ವರರ ಪ್ರಭಾವದಿಂದ ಲಿಂಗಧಾರಣೆ ಮಾಡಿ ತಮ್ಮಡಿಗಳಾಗಿದ್ದಾರೆ. ಆನುಮಲೆ, ಜೇನುಮಲೆ, ಕುನುಮಲೆ, ಪಚ್ಚೆಮಲೆ, ಪವಳಮಲೆ, ಪೊನ್ನಾಚಿಮಲೆ ಮತ್ತು ಕೊಂಗುಮಲೆ ಮುಂತಾದ ಏಳು ಮಲೆಗಳಿಂದ ಕೂಡಿದ ಈ ದಟ್ಟಾರಣ್ಯವೇ ಇವರ ವಾಸಸ್ಥಳ.ಇದರಲ್ಲಿ ಇನ್ನಷ್ಟು ಓದಿ :  

ಪ್ರವಾಸೋದ್ಯಮ

news

ಜೋಗ ಜಲಪಾತ

ಕರ್ನಾಟಕ ಶಿಲ್ಪಗಳ ನಾಡು, ಪ್ರಕೃತಿ ಸೌಂದರ್ಯದ ಚೆಲುವಿನ ಬೀಡು. ಅದಕ್ಕೆ ಪೂರಕ ಎಂಬಂತೆ ರಾಜ್ಯದಲ್ಲಿ ...

news

ಕಣ್ಮನ ಸೆಳೆಯುವ ಹೊಗೇನಕಲ್ ಜಲಪಾತ

ಹೊಗೇನಕಲ್ ಜಲಪಾತ ಕರ್ನಾಟಕ-ತಮಿಳುನಾಡು ರಾಜ್ಯಗಳ ಗಡಿಯಲ್ಲಿದೆ. ಶಿವನಸಮುದ್ರದಲ್ಲಿ ಅದ್ಭುತವಾದ ...

news

ಗತವೈಭವ ಸಾರುವ ವಿಶ್ವವಿಖ್ಯಾತ ಹಂಪೆ

ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿ ವೈಭವದಿಂದ ಮೆರೆದ ಹಂಪೆಯಲ್ಲಿನ ಪ್ರತಿಯೊಂದು ಕಲ್ಲು, ಕಲ್ಲುಗಳೂ ಕೂಡ ...

news

ದಕ್ಷಿಣ ಕಾಶ್ಮೀರ, ಭಾರತದ ಸ್ಕಾಟ್ಲೆಂಡ್ - ಬೆಡಗಿನ ಕೊಡಗು

ದಕ್ಷಿಣದ ಕಾಶ್ಮೀರ ಎಂದೇ ಖ್ಯಾತಿ ಪಡೆದಿರುವ ಕೊಡಗು ಹಸಿರು ಗಿರಿವನಗಳ ಸಿರಿವಂತ ಜಿಲ್ಲೆ. ತುಂಬಿ ಹರಿಯುವ ...

Widgets Magazine
Widgets Magazine