Widgets Magazine

ಆಂಧ್ರಪ್ರದೇಶದಲ್ಲಿ ರಾಷ್ಟ್ರಪತಿ ಅಡಳಿತ ಜಾರಿಯಿಲ್ಲ: ಸುಶೀಲ್ ಕುಮಾರ್ ಶಿಂಧೆ

ನವದೆಹಲಿ| ರಾಜೇಶ್ ಪಾಟೀಲ್|
PTI
ಪ್ರತ್ಯೇಕ ರಾಜ್ಯ ಘೋಷಣೆಯಿಂದಾಗಿ ಹೊತ್ತಿ ಉರಿಯುತ್ತಿರುವ ಆಂಧ್ರ ಪ್ರದೇಶದಲ್ಲಿ ರಾಷ್ಟ್ರಪತಿ ಅಡಳಿತ ಹೇರುವ ಯಾವುದೇ ಉದ್ದೇಶವಿಲ್ಲ ಎಂದು ಕೇಂದ್ರ ಗೃಹ ಖಾತೆ ಸಚಿವ ಸುಶೀಲ್ ಕುಮಾರ್ ಶಿಂಧೆ ಹೇಳಿದ್ದಾರೆ.

ಇಂದು ನಡೆಯಲಿರುವ ಸಂಪುಟ ಸಭೆಯಲ್ಲಿ ರಾಷ್ಟ್ರಪತಿ ಅಡಳಿತ ಘೋಷಿಸುವ ಯಾವುದೇ ಚಿಂತನೆಯಿಲ್ಲ. ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿಯವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

ಆಂಧ್ರದಲ್ಲಿ ವಿದ್ಯುತ್ ಇಲಾಖೆ ನೌಕರರು ಮುಷ್ಕರದಲ್ಲಿ ಭಾಗಿಯಾಗಿದ್ದರಿಂದ ವಿದ್ಯುತ್ ಸಮಸ್ಯೆ ತಲೆದೋರಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ.

ಆಂಧ್ರಪ್ರದೇಶದಲ್ಲಿ ಪ್ರತಿಭಟನೆಗಳು ನಿರಂತರವಾಗಿ ಮುಂದುವರಿದಲ್ಲಿ ರಾಷ್ಟ್ರಪತಿ ಅಡಳಿತ ಹೇರಲು ಕಾಂಗ್ರೆಸ್ ಎಚ್ಚರಿಕೆಯ ಹೆಜ್ಜೆಯನ್ನಿಡುತ್ತಿದೆ.ಏತನ್ಮಧ್ಯೆ, ವೈಎಸ್‌ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ಮೋಹನ್ ರೆಡ್ಡಿ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ನಿರಶನ ಹಮ್ಮಿಕೊಂಡಿರುವುದು ಮತ್ತಷ್ಟು ಉದ್ವಿಗ್ನತೆಗೆ ಕಾರಣವಾಗಿದೆ.


ಇದರಲ್ಲಿ ಇನ್ನಷ್ಟು ಓದಿ :