Widgets Magazine

ನರೇಂದ್ರ ಮೋದಿ ಸಭೆಯಲ್ಲಿ ಶಸ್ತ್ರಾಸ್ತ್ರ ಹೊಂದಿದ್ದ ಇಬ್ಬರು ವ್ಯಕ್ತಿಗಳ ಬಂಧನ

ಗೋರಖ್‌ಪುರ್| ರಾಜೇಶ್ ಪಾಟೀಲ್|
PTI
ನಗರದಲ್ಲಿ ನಡೆದ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರ ಸಾರ್ವಜನಿಕ ಸಭೆಯಲ್ಲಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಹೊರಭಾಗದಲ್ಲಿರುವ ಮನಬೇಲಾ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿರುವ ಸಂದರ್ಭದಲ್ಲಿ ಕತ್ತಿಗಳನ್ನು ಹೊಂದಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಗೋರಖ್‌ಪುರದಲ್ಲಿ ನಡೆದ ಬಿಜೆಪಿ ಸಾರ್ವಜನಿಕ ಸಭೆ ಎಲ್ಲಾ ಸಭೆಗಳಿಗಿಂತ ಜನಸಂದಣಿ ಹೆಚ್ಚಾಗಿತ್ತು ಎಂದು ಬಿಜೆಪಿ ಮುಖಂಡರು ಸಂತಸ ವ್ಯಕ್ತಪಡಿಸಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :