Widgets Magazine

ದೆಹಲಿಯಲ್ಲಿ ಇಂದಿನಿಂದ 3 ದಿನಗಳ ಲಿಂಗಾಯತ ಸಮಾವೇಶ; ಕೇಂದ್ರ ಸಚಿವ ಸದಾನಂದಗೌಡರಿಂದ ಉದ್ಘಾಟನೆ

ನವದೆಹಲಿ| pavithra| Last Modified ಸೋಮವಾರ, 10 ಡಿಸೆಂಬರ್ 2018 (09:13 IST)
ನವದೆಹಲಿ : ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲು ದೆಹಲಿಯಲ್ಲಿ ಇಂದಿನಿಂದ ಮೂರು ದಿನಗಳ ಬೃಹತ್ ಸಮಾವೇಶಕ್ಕೆ ವೇದಿಕೆ ಸಿದ್ಧವಾಗಿದ್ದು, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.


ಪ್ರತ್ಯೇಕ ಲಿಂಗಾಯತ ಹೋರಾಟದಿಂದ ದೂರ ಇರುವಂತೆ ಬಿಜೆಪಿ ಹೈಕಮಾಂಡ್ ಸೂಚಿಸಿದ್ದರೂ ಇಂದು ಈ ಹೋರಾಟಕ್ಕೆ
ಸದಾನಂದಗೌಡರು ಚಾಲನೆ ನೀಡುತ್ತಿರುವುದು ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಿಂದ ದೂರವಿದ್ದ ಬಿಜೆಪಿ ನಾಯಕರಿಗೆ ಇದೀಗ ಭಾರೀ ಕುತೂಹಲ ಮೂಡಿಸಿದೆ.


ವಿಧಾನಸಭೆ ಚುನಾವಣೆ ಮುನ್ನ ಈ ಹೋರಾಟದಿಂದ ಕೈ ಸುಟ್ಟುಕೊಂಡಿದ್ದ ಕಾಂಗ್ರೆಸ್ ನಾಯಕರು ಕ್ಷಮೆ ಕೇಳಿದ್ದ ಬೆನ್ನಲ್ಲೇ ಸದಾನಂದಗೌಡರ ಲಿಂಗಾಯತ ಪ್ರತ್ಯೇಕ ಹೋರಾಟ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್
ಡೌನ್‍ ಲೋಡ್ ಮಾಡಿಕೊಳ್ಳಿ.

ಇದರಲ್ಲಿ ಇನ್ನಷ್ಟು ಓದಿ :