Widgets Magazine
Widgets Magazine

ಸರ್ಕಾರಿ ಸೌಲಭ್ಯಕ್ಕೆ ಆಧಾರ್ ಕಡ್ಡಾಯ: ಡೆಡ್ ಲೈನ್ ಡಿಸೆಂಬರ್ 31ರವರೆಗೆ ವಿಸ್ತರಣೆ

ನವದೆಹಲಿ, ಬುಧವಾರ, 30 ಆಗಸ್ಟ್ 2017 (16:51 IST)

Widgets Magazine

ಸರ್ಕಾರದ ಸೌಲಭ್ಯಗಳನ್ನ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯ ಮಾಡುವ ನಿಯಮಾವಳಿ ಅವಧಿಯನ್ನ ಡಿಸೆಂಬರ್ 31ರವರೆಗೆ ವಿಸ್ತರಿಸಿರುವುದಾಗಿ ಬುಧವಾರ ಕೇಂದ್ರ ಸರ್ಕಾರ, ಸುಪ್ರೀಂಕೋರ್ಟ್`ಗೆ ತಿಳಿಸಿದೆ.
  


ಕೇಂದ್ರ ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, ಸುಪ್ರೀಂಕೋರ್ಟ್ ಮುಂದೆ ಹೇಳಿಕೆ ನೀಡಿದ್ಧಾರೆ. ಖಾಸಗೀತನದ ಹಕ್ಕು ಮೂಲಭೂತ ಹಕ್ಕೆಂದು ಸಂವಿಧಾನ ಪೀಠ ತೀರ್ಪು ನೀಡಿದ ಬಳಿಕ ಸರ್ಕಾರಿ ಸೌಲಭ್ಯಕ್ಕೆ ಆಧಾರ್ ಕಡ್ಡಾಯ ಕುರಿತ ಕೇಂದ್ರ ನಿರ್ಧಾರ ಪ್ರಶ್ನಿಸಿದ್ದ ಅರ್ಜಿದಾರರು ಶೀಘ್ರ ವಿಚಾರಣೆಗೆ ಒತ್ತಾಯಿಸಿದ್ದಾರೆ.
 
ಹೀಗಾಗಿ, ಸುಪ್ರೀಂಕೋರ್ಟ್ ಆಧಾರ್ ಕಡ್ಡಾಯ ಪ್ರಶ್ನಿಸಿರುವ ಎಲ್ಲ ಅರ್ಜಿಗಳ ವಿಚಾರಣೆಯನ್ನ ನವೆಂಬರ್ 1ರಂದು ನಡೆಸಲು ತೀರ್ಮಾನಿಸಿದೆ. ಈ ಮಧ್ಯೆ, ತ್ರಿಸದಸ್ಯರ ಪೀಠದ ಬದಲು ಪಂಚಪೀಠದ ಮುಂದೆ ಅರ್ಜಿ ಪಟ್ಟಿ ಮಾಡಲು ಅಟಾರ್ನಿ ಜನರಲ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿಗೆ ಮನವಿ ಮಾಡಿದ್ದಾರೆ.

ಈ ಹಿಂದೆ ಜೂನ್ 27ಕ್ಕೆ ಸರ್ಕಾರಿ ಯೋಜನೆಗಳಿಗೆ ಆಧಾರ್ ಕಡ್ಡಾಯ ನಿಯಮಾವಳಿ ಜಾರಿಗೆ ಡೆಡ್ ಲೈನ್ ವಿಧಿಸಲಾಗಿತ್ತು. ಬಳಿಕ, ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿತ್ತು. ಇದೀಗ, ಮತ್ತೆ ಡಿಸೆಂಬರ್ 31ಕ್ಕೆ ವಿಸ್ತರಣೆ ಮಾಡಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಆಧಾರ್ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರ Aadhar Supreme Court Central Government

Widgets Magazine

ಸುದ್ದಿಗಳು

news

ತಮಿಳುನಾಡು ಸರಕಾರದ ಬಿಕ್ಕಟ್ಟಿಗೆ ಮೋದಿ ಸರಕಾರವೇ ಕಾರಣ: ಸ್ಟಾಲಿನ್

ಚೆನ್ನೈ: ಎಐಎಡಿಎಂಕೆ ನೇತೃತ್ವದ ತಮಿಳುನಾಡು ಸರಕಾರದ ಬಿಕ್ಕಟ್ಟಿಗೆ ಪ್ರಧಾನಿ ಮೋದಿ ನೇತೃತ್ವದ ಸರಕಾರವೇ ...

news

ಖ್ಯಾತ ಹಿರಿಯ ಗಾಯಕ ಎಲ್.ಎನ್.ಶಾಸ್ತ್ರಿ ಇನ್ನಿಲ್ಲ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಖ್ಯಾತ ಗಾಯಕ ಎಲ್.ಎನ್.ಶಾಸ್ತ್ರಿ(46) ...

news

ಲೋಕಪಾಲ್ ಜಾರಿಗೊಳಿಸಿ ಇಲ್ಲದಿದ್ರೆ ಹೋರಾಟ: ಪ್ರಧಾನಿ ಮೋದಿಗೆ ಅಣ್ಣಾ ಹಜಾರೆ ಎಚ್ಚರಿಕೆ

ರಾಲೇಗಣ್‌ಸಿದ್ದಿ: ಲೋಕಪಾಲರನ್ನು ನೇಮಕ ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಸರಕಾರ ವಿಳಂಬ ಮಾಡುತ್ತಿರುವ ...

news

ಬಿಬಿಎಂಪಿಯಲ್ಲಿ ಜೆಡಿಎಸ್‌ ಕಾರ್ಪೋರೇಟರ್‌ಗಳ ಸಂಖ್ಯೆ ಎಷ್ಟಿದೆ: ಜೆಡಿಎಸ್‌ಗೆ ಜಾರ್ಜ್ ಟಾಂಗ್

ಬಿಬಿಎಂಪಿಗೆ ಮೇಯರ್ ಸ್ಥಾನ ಬಿಟ್ಟುಕೊಡುವ ವಿಟಾರ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಚಿವ ಕೆ.ಜೆ.ಜಾರ್ಜ್, ...

Widgets Magazine Widgets Magazine Widgets Magazine