ಪೆಟ್ರೋಲ್, ಡಿಸೇಲ್ ಗೆ ಪರ್ಯಾಯ ತೈಲ- ಸಚಿವ ನಿತಿನ್ ಗಡ್ಕರಿ

ಪುಣೆ, ಶನಿವಾರ, 2 ಜೂನ್ 2018 (13:57 IST)

ಪುಣೆ : ಕೇಂದ್ರ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದ ತೈಲ ದರ ಏರಿಕೆಯ ಕುರಿತಾಗಿ ಶಾಶ್ವತ ಪರಿಹಾರಕ್ಕಾಗಿ ಪೆಟ್ರೋಲ್, ಡಿಸೇಲ್ ಗೆ ಪರ್ಯಾಯವಾಗಿ ತೈಲವನ್ನು ಕಂಡುಕೊಳ್ಳಬೇಕಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ.


ಇತ್ತಿಚೆಗೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾದ ನಂತರ ಇದೀಗ ಮತ್ತೆ  ಇಳಿಕೆ ಕಂಡುಬಂದಿರುವ ಹಿನ್ನಲೆಯಲ್ಲಿ ಈ ಬಗ್ಗೆ ಪುಣೆಯಲ್ಲಿ ಮಾತನಾಡಿದ ಗಡ್ಕರಿ ಅವರು, ಪರ್ಯಾಯ ತೈಲದ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ. ನಾವು ಪೆಟ್ರೋಲ್ ಡಿಸೇಲ್ ಮೇಲೆ ಸಬ್ಸಿಡಿ ನೀಡುತ್ತಿಲ್ಲ. ಬದಲಾಗಿ ಅಡುಗೆ ಅನಿಲ ಸಂಪರ್ಕವನ್ನು 8 ಕೋಟಿ ಜನರಿಗೆ ಒದಗಿಸುತ್ತೇವೆ ಎಂದು ಹೇಳಿದ್ದಾರೆ.


ಹಾಗೇ ‘ದೇಶದ ತೈಲ ಪೂರೈಕೆಗೆ ಪರ್ಯಾಯವಾಗಿ ಇಥನಾಲ್ಮ ಮೆಥುನಾಲ್, ಬಯೋಡಿಸೇಲ್, ಬಯೋಸಿಎನ್ ಜಿ ಹಾಗೂ ವಿದ್ಯುತ್ ಅನ್ನು ಬಳಸಿಕೊಳ್ಳುವ ಬಗ್ಗೆ ಚಿಂತಿಸಲಾಗುತ್ತಿದೆ ‘ಎಂದು ಕೂಡ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಜೆಡಿಎಸ್ ಬಗ್ಗೆ ವೇಣುಗೋಪಾಲ್ ಬಳಿ ಅಸಮಾಧಾನ ತೋಡಿಕೊಂಡ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ರಚನೆ ಸಂಬಂಧವಾಗಿ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಬಳಿ ...

news

ಕರ್ನಾಟಕ ರಕ್ಷಣಾ ವೇದಿಕೆಯಿಂದ ಕಾಲಾ ಚಿತ್ರದ ಬಿಡುಗಡೆ ವಿರೋಧಿಸಿ ಪ್ರತಿಭಟನೆ

ಬೆಂಗಳೂರು : ಸೂಪರ್ ಸ್ಟಾರ್ ರಜನೀಕಾಂತ್ ಅವರು ಕಾವೇರಿ ವಿವಾದದಲ್ಲಿ ಕರ್ನಾಟಕದ ವಿರುದ್ಧವಾಗಿ ...

news

ದೆಹಲಿಯಲ್ಲಿ ಒಂದಾಗಲಿರುವ ಕಾಂಗ್ರೆಸ್-ಎಎಪಿ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯೇತರ ಪಕ್ಷಗಳು ಒಂದಾಗುವ ಕಾಂಗ್ರೆಸ್ ಪ್ರಯತ್ನಕ್ಕೆ ...

news

ಈ ಸರ್ಕಾರ ಅಂಗವಿಕಲ ಮಗು: ಕೆಎಸ್ ಈಶ್ವರಪ್ಪ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ರಾಜ್ಯದ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ...