ನವದೆಹಲಿ: ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ ಎನ್ನಲಾಗಿದೆ. ನಿನ್ನೆ ತಡ ರಾತ್ರಿ ಗೃಹ ಸಚಿವ ಅಮಿತ್ ಶಾ ಎರಡೆರಡು ಬಾರಿ ಆಸ್ಪತ್ರೆಗೆ ಭೇಟಿ ನೀಡಿರುವುದು ಜೇಟ್ಲಿ ಆರೋಗ್ಯ ಸ್ಥಿತಿ ಬಗ್ಗೆ ಕಳವಳ ಮೂಡಿಸಿದೆ.