ವಿಧಾನಸಭೆ ಚುನಾವಣೆ: ಮೋದಿಯ ತವರು ರಾಜ್ಯದಲ್ಲಿ ಆಮ್ ಆದ್ಮಿ ಪಾರ್ಟಿ ಸ್ಪರ್ಧೆ

ನವದೆಹಲಿ, ಶನಿವಾರ, 2 ಸೆಪ್ಟಂಬರ್ 2017 (19:18 IST)

ಗುಜರಾತ್‌ನ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ನಿರ್ಧರಿಸಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ತವರು ರಾಜ್ಯವಾದ ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷ ಚುನಾವಣೆ ಕಣಕ್ಕಿಳಿಯುತ್ತಿರುವುದು ಬಿಜೆಪಿ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
 
ಗುಜರಾತ್‌ನ ಅಹ್ಮದಾಬಾದ್‌ನಲ್ಲಿ ಸೆಪ್ಟೆಂಬರ್ 17 ರಂದು ಬೃಹತ್ ರೋಡ್ ಶೋ ನಡೆಸಲು ಆಮ್ ಆದ್ಮಿ ಪಕ್ಷ ನಿರ್ಧರಿಸಿದ್ದು, ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ನೇತೃತ್ವ ವಹಿಸಲಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
 
ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಮ್ ಆದ್ಮಿ ಪಕ್ಷ ಬಹುಮತಗಳಿಸುವಲ್ಲಿ ವಿಫಲವಾಗಿ ವಿಪಕ್ಷವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಸ್ಮರಿಸಬಹುದು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಪ್ರಧಾನಿ ಮೋದಿ ಅರವಿಂದ್ ಕೇಜ್ರಿವಾಲ್ ಆಮ್ ಆದ್ಮಿ ಪಾರ್ಟಿ ಗುಜರಾತ್ ವಿಧಾನಸಭೆ ಚುನಾವಣೆ Bjp Arvind Kejriwal Pm Modi Aam Admi Party Gujarat Elections

ಸುದ್ದಿಗಳು

news

ಜೆಡಿಯು ಮೋದಿ ಸಂಪುಟಕ್ಕೆ ಸೇರ್ಪಡೆ ಬಹುತೇಕ ಅನುಮಾನ

ನವದೆಹಲಿ: ಎನ್‌ಡಿಎದೊಂದಿಗಿನ ಮೈತ್ರಿಯ ನಂತರ ಮೊದಲ ಬಾರಿಗೆ ಪುನಾರಚನೆಯಾಗಲಿರುವ ಪ್ರಧಾನಿ ಮೋದಿ ಸಂಪುಟಕ್ಕೆ ...

news

ಲಿಂಗಾಯುತ ಪ್ರತ್ಯೇಕ ಧರ್ಮಕ್ಕೆ ಸಿದ್ದಗಂಗಾ ಶ್ರೀಗಳ ಬೆಂಬಲ

ತುಮಕೂರು: ಲಿಂಗಾಯುತ ಪ್ರತ್ಯೇಕ ಧರ್ಮಕ್ಕೆ ಸಿದ್ದಗಂಗಾ ಶ್ರೀಗಳ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ...

news

ಬಿಜೆಪಿ ಬೈಕ್ ರ್ಯಾಲಿ ಮೇಲೆ ಸಿಎಂ ಸಿದ್ದರಾಮಯ್ಯ ಕೆಂಗೆಣ್ಣು

ಬೆಂಗಳೂರು: ಬಿಜೆಪಿಯ ಬೈಕ್ ರ್ಯಾಲಿ ಮಂಗಳೂರು ತಲುಪಬಾರದು ಎಂದು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ...

news

ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಬೆಂಗಳೂರಿಗೆ

ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ನಾಳೆ ಸಂಜೆ ಬೆಂಗಳೂರಿಗೆ ಆಗಮಿಸಲಿದ್ದಾರೆ ...

Widgets Magazine