ಕಾಂಗ್ರೆಸ್ ಗೆ ಬಿಗ್ ಶಾಕ್; ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಬಿಜೆಪಿಗೆ ಸೇರ್ಪಡೆ

ನವದೆಹಲಿ, ಶುಕ್ರವಾರ, 15 ಮಾರ್ಚ್ 2019 (06:51 IST)

ನವದೆಹಲಿ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಈ ವೇಳೆ  ಕಾಂಗ್ರೆಸ್ ನ ಶಾಸಕರು ಬಿಜೆಪಿಗೆ ಸೇರ್ಪಡೆಯಾಗುವುದರ ಮೂಲಕ ಕಾಂಗ್ರೆಸ್ ಗೆ ಬಿಗ್ ಶಾಕ್ ನೀಡುತ್ತಿದ್ದಾರೆ.


ಹೌದು . ಉಗ್ರರ ಶಿಬಿರದ ಮೇಲೆ ಭಾರತೀಯ ವಾಯು ಪಡೆ ನಡೆಸಿದ ಏರ್ ಸ್ಟ್ರೈಕ್ ಬಗ್ಗೆ ವ್ಯಕ್ತಪಡಿಸಿದ್ದಕ್ಕೆ ಬೇಸರಗೊಂಡ ಕಾಂಗ್ರೆಸ್‍ ನ ಹಿರಿಯ ನಾಯಕ, ಸೋನಿಯಾ ಗಾಂಧಿ ಅವರ ಆಪ್ತರಾಗಿದ್ದ ಟಾಮ್ ವಡಕ್ಕನ್ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ನೇತೃತ್ವದಲ್ಲಿ ಗುರುವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.


ಪಾಕಿಸ್ತಾನದ ಬಾಲಕೋಟ್ ಉಗ್ರರ ಶಿಬಿರದ ಮೇಲೆ ಭಾರತೀಯ ವಾಯು ಪಡೆ ನಡೆಸಿದ ಏರ್ ಸ್ಟ್ರೈಕ್ ಹಾಗೂ ದೇಶದ ಸಶಸ್ತ್ರ ಪಡೆಯಗಳ ಕುರಿತು ಕಾಂಗ್ರೆಸ್ ಅನುಮಾನ ವ್ಯಕ್ತಪಡಿಸಿದೆ. ಒಂದು ರಾಜಕೀಯ ಪಕ್ಷವೇ ದೇಶದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಹೀಗಾಗಿ ನಾನು ಪಕ್ಷವನ್ನು ತ್ಯಜಿಸುವುದು ಅನಿವಾರ್ಯವಾಯಿತು ಎಂದು ಟಾಮ್ ವಡಕ್ಕನ್ ತಿಳಿಸಿದ್ದಾರೆ. 


ಅಲ್ಲದೇ ಕಾಂಗ್ರೆಸ್ ಪಕ್ಷದಲ್ಲಿ ನಾಯಕರನ್ನು ಬಳಸಿಕೊಂಡು, ಬೇಡವಾದಾಗ ಕೈಬಿಡಲಾಗುತ್ತಿದೆ. ಅಲ್ಲಿ ಕುಟುಂಬ ರಾಜಕಾರಣ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಾತೆ ಮಹಾದೇವಿ ಲಿಂಗೈಕ್ಯ

ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲು ಆಗಿದ್ದ ಮಾತೆ ಮಹಾದೇವಿ ಲಿಂಗೈಕ್ಯರಾಗಿದ್ದಾರೆ.

news

ಎಲ್ಲಿ ರೋಮ್ಯಾನ್ಸ್ ಮಾಡಿದ್ರೆ ಮಹಿಳೆಯರಿಗೆ ಇಷ್ಟ?

ಗಂಡು-ಹೆಣ್ಣಿನ ನಡುವೆ ರೋಮ್ಯಾನ್ಸ್ ನಡೆಸಲು ಮೂಡ್ ಬರಬೇಕು ಎಂಬುದೇನೋ ನಿಜ. ಆದರೆ ಕೆಲವು ಮಹಿಳೆಯರಿಗೆ ಮೂಡ್ ...

news

ಮಂಡ್ಯದಲ್ಲಿ ನಿಖಿಲ್ ಹೆಸರು ಘೋಷಣೆ

ಹಾಸನದ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಹೆಸರು ಘೋಷಣೆ ಹಿನ್ನೆಲೆಯಲ್ಲಿ ಇಂದು ...

news

ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿ ಶಾಮನೂರು ಶಿವಶಂಕರಪ್ಪ ಅವಿರೋಧ ಆಯ್ಕೆ ಆಗಿದ್ದಾರೆ.

Widgets Magazine