ರಾಷ್ಟ್ರಪತಿ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಪಕ್ಕಾ?

NewDelhi, ಬುಧವಾರ, 17 ಮೇ 2017 (07:09 IST)

Widgets Magazine

ನವದೆಹಲಿ: ಜುಲೈನಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ತಮ್ಮ ತಮ್ಮ ಬಣದ ಅಭ್ಯರ್ಥಿಯನ್ನು ಗೆಲ್ಲಿಸಲು ಆಡಳಿತ ಮತ್ತು ವಿಪಕ್ಷಗಳು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ.


 
ಅದರಲ್ಲೂ ಆಡಳಿತಾರೂಢ ಬಿಜೆಪಿ ಮೈತ್ರಿಕೂಟ ಒಂದೆಡೆಯಾದರೆ, ಉಳಿದೆಲ್ಲಾ ರಾಜಕೀಯ ಪಕ್ಷಗಳು ಒಂದಾಗಿ ಒಮ್ಮತದ ಅಭ್ಯರ್ಥಿಯನ್ನು ಘೋಷಿಸಲಿದ್ದಾರೆ. ಬಿಹಾರ ಸಿಎಂ ನಿತೀಶ್ ಕುಮಾರ್ ತಮ್ಮ ಅಭಿಪ್ರಾಯವನ್ನು ಬಹಿರಂಗಪಡಿಸಿದ್ದಾರೆ.
 
ಅದರಂತೆ ಹಾಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಎರಡನೇ ಬಾರಿಗೆ ರಾಷ್ಟ್ರಪತಿಯಾಗಲಿ ಎಂದು ಆಶಿಸಿದ್ದಾರೆ. ಅದಕ್ಕೆ ಕಾಂಗ್ರೆಸ್ ಕೂಡಾ ಸಮ್ಮತಿಸಿದೆ. ಪ. ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಕೂಡಾ ಇಂದು ಕಾಂಗ್ರೆಸ್ ಧುರೀಣೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
 
ಅತ್ತ ಪ್ರಣಬ್ ಮುಖರ್ಜಿ ಸರ್ಕಾರ ತನ್ನನ್ನು ಎರಡನೇ ಬಾರಿಗೆ ನಾಮನಿರ್ದೇಶನ ಮಾಡಿದರೆ ಮಾತ್ರ ಪದವಿಯಲ್ಲಿ ಮುಂದುವರಿಯುವ ಬಗ್ಗೆ ಚಿಂತಿಸುವುದಾಗಿ ಹೇಳಿಕೊಂಡಿದ್ದಾರೆ. ಇದೀಗ ಮತ್ತೊಮ್ಮೆ ಕಾಂಗ್ರೆಸ್ ನಾಯಕ ಪ್ರಣಬ್ ರನ್ನು ಅಭ್ಯರ್ಥಿಯಾಗಿ ವಿಪಕ್ಷಗಳು ಘೋಷಿಸುತ್ತವೋ ಎಂದು ಕಾದು ನೋಡಬೇಕಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

‘ರಾಮಜನ್ಮಭೂಮಿ ಅಯೋಧ್ಯೆ ಅಲ್ಲ ಎಂದು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿದರೆ ಹೇಗಿರುತ್ತೆ?’

ನವದೆಹಲಿ: ರಾಮನ ಜನ್ಮಭೂಮಿ ಅಯೋಧ್ಯೆಯಲ್ಲ ಎಂದು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದರೆ ಹಿಂದೂಗಳ ಭಾವನೆಗೆ ...

news

‘ವಿರೋಧಿ ನಾಯಕರ ಮನೆ ಮೇಲೆ ದಾಳಿ ನಡೆಸಲು ನಾವು ಹೇಳಿಲ್ಲ’

ನವದೆಹಲಿ: ಮಾಜಿ ಕೇಂದ್ರ ಸಚಿವರಾದ ಪಿ. ಚಿದಂಬರಂ ಮತ್ತು ಲಾಲೂ ಪ್ರಸಾದ್ ಯಾದವ್ ಮನೆ ಮೇಲೆ ಸಿಬಿಐ ಮತ್ತು ...

news

ನನಗೆ ಬಹಳ ಜನ ಆಪ್ತರಿದ್ದಾರೆ: ಗೃಹ ಸಚಿವ ಪರಮೇಶ್ವರ್

ಚಿಕ್ಕಮಗಳೂರು: ಎರಡೆಲೆ ಚಿಹ್ನೆ ಲಂಚದ ಪ್ರಕರಣದಲ್ಲಿ ಸಚಿವ ಪರಮೇಶ್ವರ್ ಆಪ್ತನನ್ನು ಬಂಧಿಸಲಾಗಿದೆ ಎನ್ನುವ ...

news

ದೇವೇಗೌಡರನ್ನು ಭೇಟಿಯಾದ ಎಚ್.ವಿಶ್ವನಾಥ್: ರಾಜಕೀಯ ಕೋಲಾಹಲ

ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ಎಚ್.ವಿಶ್ವನಾಥ್ ಜೆಡಿಎಸ್ ವರಿಷ್ಠ ...

Widgets Magazine Widgets Magazine