ತನ್ನ ಸಂಬಂಧಕ್ಕೆ ಅಡ್ಡಿಪಡಿಸಿದ ತಂದೆಗೆ ಬೆಂಕಿ ಹಚ್ಚಿದ ಮಗಳು

ಬರೇಲಿ| pavithra| Last Modified ಗುರುವಾರ, 7 ಜನವರಿ 2021 (07:22 IST)
ಬರೇಲಿ :  ಮಹಿಳೆಯೊಬ್ಬಳು ತನ್ನ ಸಂಬಂಧಕ್ಕೆ ಆಕ್ಷೇಪ ವ್ಯಕ್ತಪಡಿಸಿದ 55 ವರ್ಷದ ತಂದೆಗೆ ಬೆಂಕಿ ಹಚ್ಚಿದ ಘಟನೆ ಉತ್ತರ ಪ್ರದೇಶದ ಬುಡಾನ್ ನ ವಾಜಿರಗಂಜ್ ನಲ್ಲಿ ನಡೆದಿದೆ.

ಕೃಷಿಕನಾಗಿದ್ದ ಸಂತ್ರಸ್ತ ವ್ಯಕ್ತಿಗೆ ಪತ್ನಿ, ಇಬ್ಬರು ಹೆಣ್ಣುಮಕ್ಕಳು ಹಾಗೂ ಒಬ್ಬ ಮಗನಿದ್ದಾನೆ. ಮಗಳಿಗೆ ವ್ಯಕ್ತಿಯೊಬ್ಬನ ಜೊತೆ ಸಂಬಂಧವಿತ್ತು. ಈ ವಿಚಾರ ತಿಳಿದ ತಂದೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಮಗಳು ತಂದೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ದೇಹ  50% ಸುಟ್ಟು ಹೋಗಿದೆ ಎನ್ನಲಾಗಿದೆ.ಈ ಬಗ್ಗೆ ಸಂತ್ರಸ್ತ ವ್ಯಕ್ತಿಯ ಹೇಳಿಕೆಯ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :