ಪ್ರಧಾನಿ ಮೋದಿ ಹೇಳಿಕೆಗೆ ತಿರುಗೇಟು ನೀಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ನವದೆಹಲಿ, ಸೋಮವಾರ, 16 ಜುಲೈ 2018 (13:22 IST)

ನವದೆಹಲಿ : ಪ್ರಧಾನಿ ಮೋದಿ ಅವರು ಕೇವಲ ಮುಸ್ಲಿಮರಿಗಾಗಿ ಮಾತ್ರ ಕೆಲಸ ಮಾಡುವ ಪಕ್ಷವಾಗಿದೆ ಎಂದು ಟೀಕಿಸಿರುವುದಕ್ಕೆ ತಿರುಗೇಟು ನೀಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಹಿಂದೂ-ಮುಸ್ಲಿಂ ಬಾಂಧವ್ಯದಿಂದ ಮಾತ್ರವೇ ಭಾರತ ನಂಬರ್ ಒನ್ ಆಗುತ್ತದೆ ಎಂದು ಹೇಳಿದ್ದಾರೆ.


ಇಂದೋರ್ ನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್ ಅವರು,’ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಾಲ್ಕು ವರ್ಷಗಳ ಬಳಿಕವೂ ಪ್ರಧಾನಿ ಮೋದಿ ಹಿಂದೂ-ಮುಸ್ಲಿಂ ಸಮಸ್ಯೆಗಳ ಕುರಿತು ಮಾತನಾಡುತ್ತಿದ್ದಾರೆ ಎಂದರೆ ಅವರ ಸಾಧನೆ ಏನು? ಕಳೆದ ನಾಲ್ಕು ವರ್ಷಗಳಲ್ಲಿ ಅವರ ಸರ್ಕಾರ ಏನು ಮಾಡುತ್ತಿತ್ತು ಎಂದು ಟೀಕಿಸಿದ್ದಾರೆ.


ಹಾಗೇ ‘ಪ್ರಧಾನಿ ಮೋದಿ ಅವರ ಮಾತು ಕೇಳಿದರೆ ಅವರ ಸರ್ಕಾರ ಇನ್ನೂ ಯಾವ ಕೆಲಸವನ್ನೂ ಮಾಡಿಲ್ಲ ಎಂದೆನಿಸುತ್ತಿದೆ. ತ್ರಿವಳಿ ತಲಾಖ್ ಬಗ್ಗೆ ತಮ್ಮ ಸಾಧನೆಯ ಬಗ್ಗೆ ಮಾತನಾಡುವ ಮೋದಿ, ತಮ್ಮದೇ ಪಕ್ಷ ಪ್ರತಿಪಕ್ಷ ಸ್ಥಾನದಲ್ಲಿದ್ದಾಗ ತ್ರಿವಳಿ ತಲ್ಲಾಖ್ ಗೆ ಬೆಂಬಲ ನೀಡಬಹುದಿತ್ತು, ಅಂದು ಬೆಂಬಲ ನೀಡದೇ ತಮ್ಮ ರಾಜಕೀಯ ಲಾಭಕ್ಕಾಗಿ ಅದನ್ನು ಬಿಜೆಪಿ ಬಳಸಿಕೊಂಡಿತು’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಹದಿನೈದು ದಿನಗಳಿಂದ ಸೂರ್ಯನನ್ನೇ ಕಾಣದ ಜನರು…!

ಪರ್ವತಗಳ ಶ್ರೇಣಿ ಕಾಫಿ ನಾಡು ಮಲೆನಾಡು ಪ್ರದೇಶದಲ್ಲಿ ಭಾರಿ ಗಾಳಿ ಸಹಿತ ಮಳೆ ಮುಂದುವರಿದಿದೆ. ಸುಮಾರು ...

news

ಕೈ ಕೊಟ್ಟ ಆರಿದ್ರಾ ಮಳೆ: ದನಗಳ ಪಾಲಾಯ್ತು ಬೆಳೆ

ರಾಜ್ಯಾದ್ಯಂತ ವರುಣನ ಆರ್ಭಟ ಜೊರಾಗಿದೆ. ಆದರೆ ನಿಗದಿತ ಸಮಯದಲ್ಲಿ ಬಾರದೇ ರೈತನ ಜೀವನದಲ್ಲಿ ...

news

ಕಳಸಾ ಬಂಡೂರಿ ಹೋರಾಟಕ್ಕೆ ಇಂದಿಗೆ ಮೂರು ವರ್ಷ

ರಾಜ್ಯಾದ್ಯಂತ ಹೋರಾಟದ ಕಿಚ್ಚು ಹಚ್ಚಿಸಿರುವ ಕಳಸಾ ಬಂಡೂರಿ ಹೋರಾಟಕ್ಕೆ ಇಂದಿಗೆ ಮೂರು ವರ್ಷಗಳು ತುಂಬಿದವು. ...

news

ಎಸ್ಕೇಪ್ ಆಗಲು ಯತ್ನಿಸಿದ ಆರೋಪಿಗೆ ಆಗಿದ್ದೇನು ಗೊತ್ತಾ?

ಪೊಲೀಸ್ ವಶದಲ್ಲಿದ್ದ ಆರೋಪಿ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾನೆ. ಪರಾರಿಯಾಗಲು ಯತ್ನಿಸಿದ ಆರೋಪಿ ...

Widgets Magazine
Widgets Magazine