Widgets Magazine

ಅಪ್ರಾಪ್ತ ಪುತ್ರಿಯ ಮೇಲೆ ರೇಪ್ ಎಸಗಿದ ಕಾಮುಕ ತಂದೆ ಅರೆಸ್ಟ್

ಕೋಟಾ| Rajesh patil| Last Modified ಭಾನುವಾರ, 3 ಡಿಸೆಂಬರ್ 2017 (12:08 IST)
ಅಪ್ರಾಪ್ತ ಏಳು ವರ್ಷದ ಪುತ್ರಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ ಆರೋಪದ ಮೇಲೆ ಕಾಮುಕ ತಂದೆಯನ್ನು ಬಂಧಿಸಿದ ಘಟನೆ ಝಾಲ್ವಾರ್ ಜಿಲ್ಲೆಯಲ್ಲಿ ವರದಿಯಾಗಿದೆ.
ತಾಯಿಯನ್ನು ಕಳೆದುಕೊಂಡಿದ್ದ ಬಾಲಕಿ, ಅಂಗನವಾಡಿ ಸಿಬ್ಬಂದಿಯ ಬಳಿ ತನ್ನ ನೋವನ್ನು ಹೇಳಿಕೊಂಡಾಗ ಘಟನೆ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೊಳಗಾದ ಬಾಲಕಿಯ ತಂದೆ ಮೊಹಮ್ಮದ್ ರಯೀಸ್‌ನನ್ನು ಪೊಲೀಸರು ಪೋಸ್ಕೋ ಕಾಯ್ದೆಯಡಿ ಬಂಧಿಸಿದ್ದಾರೆ. 
 
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ಸಾಬೀತಾಗಿದೆ. 
 
ಕಳೆದ ಆರು ದಿನಗಳಲ್ಲಿ ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ನಡೆದಿರುವ ಘಟನೆಗಳು ಜಿಲ್ಲೆಯಲ್ಲಿ ವರದಿಯಾಗಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :