ಐಟಿ ದಾಳಿ ವೇಳೆ ದಾಖಲೆ ಹರಿಯಲು ಯತ್ನ: ಅರುಣ್ ಜೇಟ್ಲಿ

ನವದೆಹಲಿ, ಬುಧವಾರ, 2 ಆಗಸ್ಟ್ 2017 (12:39 IST)

Widgets Magazine

ಈಗಲ್ ಟನ್ ರೆಸಾರ್ಟ್`ನಲ್ಲಿ ಐಟಿ ದಾಳಿ ವೇಳೆ ದಾಖಲೆಗಳನ್ನ ಹರಿಯಲು ಸಚಿವರು ಪ್ರಯತ್ನ ನಡೆಸಿದ್ದಾರೆ. ಬಳಿಕ ಹರಿದ ದಾಖಲೆಗಳನ್ನ ಮಹಜರ್ ಮಾಡಿ ವಶಕ್ಕೆ ಪಡೆಯಲಾಗಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.  


ಐಟಿ ಅಧಿಕಾರಿಗಳನ್ನ ಬಳಸಿಕೊಂಡು ಕಾಂಗ್ರೆಸ್ ನಾಯಕರನ್ನ ಬಳಸಿಕೊಂಡು ಕಾಂಗ್ರೆಸ್ ನಾಯಕರನ್ನ ಬೆದರಿಸುವ ಯತ್ನ ನಡೆದಿದೆ. ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಈ ಕೀಳುಮಟ್ಟಕ್ಕೆ ಇಳಿದಿದ್ದಾರೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಹಣಕಾಸು ಸಚಿವ ಅರುಣ್ ಜೇಟ್ಲಿ, ಐಟಿ ದಾಳಿಗೂ ಗುಜರಾತ್ ಚುನಾವಣೆಗೂ ಸಂಬಂಧವಿಲ್ಲ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ರೆಸಾರ್ಟ್`ನಲ್ಲಿ ಇದ್ದುದರಿಂದ ದಾಳಿ ನಡೆಸಿದ್ದಾರೆ. ಇದರಲ್ಲಿ ಸರ್ಕಾರದ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೇವೇಳೆ, ಐಟಿ ದಾಳಿ ವೇಳೆ ದಾಖಲೆ ಪತ್ರಗಳನ್ನ ಹರಿಯುವ ಯತ್ನ ನಡೆದಿದೆ.  ಮಹಜರ್ ಮಾಡಿ ಹರಿದ ದಾಖಲೆಗಳನ್ನೇ ವಶಪಡಿಸಿಕೊಳ್ಳಲಾಗಿದೆ. ಹಣಕಾಸು ಅಪರಾಧದಡಿ ಕೇಸು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಒದಿ.. ಡಿಕೆಶಿ ನಿವಾಸದಲ್ಲಿ ಐಟಿ ಅಧಿಕಾರಿಗಳಿಗೆ ಸಿಕ್ಕ ಹಣವೆಷ್ಟು ಗೊತ್ತಾ..?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

‘ಐಟಿ ರೇಡ್ ಗೂ ಗುಜರಾತ್ ರಾಜಕಾರಣಕ್ಕೂ ಸಂಬಂಧವಿಲ್ಲ’

ನವದೆಹಲಿ: ಸಚಿವ ಡಿಕೆ ಶಿವಕುಮಾರ್ ಅವರ ನಿವಾಸಗಳ ಮೇಲೆ ಇಂದು ಐಟಿ ಅಧಿಕಾರಿಗಳು ದಾಳಿ ನಡೆಸಿರುವುದು ...

news

ಡಿಕೆಶಿ ಮನೆ ಮೇಲಿನ ಐಟಿ ರಾಜಕೀಯಪ್ರೇರಿತವಾಗಿದೆ: ಕಾಂಗ್ರೆಸ್ ನಾಯಕರ ಕಿಡಿ

ರಾಜ್ಯಸಭಾ ಚುನಾವಣೆ ದೃಷ್ಟಿಯಿಂದ ಕೇಂದ್ರ ಸರ್ಕಾರ ರಾಜಕೀಯ ಪ್ರೇರಿತವಾಗಿ ಸಚಿವ ಡಿ.ಕೆ. ಶಿವಕುಮಾರ್ ಮನೆ ...

news

ಐಟಿ ರೇಡ್: ಸಿಎಂ ಸಿದ್ದರಾಮಯ್ಯಗೆ ಕರೆ ಮಾಡಿದ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ?

ನವದೆಹಲಿ: ಡಿಕೆ ಶಿವಕುಮಾರ್ ನಿವಾಸಗಳ ಮೇಲೆ ನಡೆದ ಐಟಿ ದಾಳಿಗಳ ಬೆನ್ನಲ್ಲೇ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ...

news

ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ವಶಪಡಿಸಿಕೊಂಡ ಹಣ ಎಷ್ಟು ಗೊತ್ತಾ..?

ಆದಾಯ ತೆರಿಗೆ ಇಲಾಖೆ ಕರ್ನಾಟಕದ ಸಚಿವ ಡಿ.ಕೆ. ಶಿವಕುಮಾರ್ ಮನೆ ಮೇಲೆ ದಾಳಿ ನಡೆಸಿದೆ. ಡಿ.ಕೆ. ಶಿವಕುಮಾರ್ ...

Widgets Magazine