ಗುಜರಾತ್: ರಾಹುಲ್ ಗಾಂಧಿ ಕಾರಿನ ಮೇಲೆ ಕಲ್ಲು ತೂರಾಟ

ಗುಜರಾತ್, ಶುಕ್ರವಾರ, 4 ಆಗಸ್ಟ್ 2017 (16:46 IST)

ರಾಜ್ಯದ ಪ್ರವಾಸದಲ್ಲಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾರಿನ ಮೇಲೆ ಕೆಲ ಕಿಡಿಗೇಡಿಗಳು ನಡೆಸಿದ ಘಟನೆ ವರದಿಯಾಗಿದೆ. ಘಟನೆಯಲ್ಲಿ ರಾಹುಲ್ ಭದ್ರತಾ ಸಿಬ್ಬಂದಿಯೊಬ್ಬರಿಗೆ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ
 
ಉದ್ರಿಕ್ತ ಕೆಲ ಕಿಡಿಗೇಡಿಗಳು ನಡೆಸಿದ ಕಲ್ಲು ತೂರಾಟದಲ್ಲಿ ರಾಹುಲ್ ಗಾಂಧಿಯವರ ಕಾರಿನ ಗಾಜು ಪುಡಿ ಪುಡಿಯಾಗಿದೆ. ಕೂಡಲೇ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ನಿಭಾಯಿಸುವಲ್ಲಿ ಯಶಸ್ವಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಗುಜರಾತ್ ಕಾಂಗ್ರೆಸ್‌ ಶಾಸಕರಿಗೆ ಕರ್ನಾಟಕ ರಾಜ್ಯದಲ್ಲಿ ಆಶ್ರಯ ನೀಡಿರುವುದನ್ನು ವಿರೋಧಿಸಿ, ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.  
 
ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯಸಭೆ ಅಭ್ಯರ್ಥಿ ಅಹ್ಮದ್ ಪಟೇಲ್‌ ಸೋಲಿಸುವ ಸಂಚು ವಿಫಲವಾಗಿದ್ದರಿಂದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೆಂಬಲಿಗರು ಇಂತಹ ಹೀನ ಕೃತ್ಯ ಎಸಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.
 
ಅಹ್ಮದ್ ಪಟೇಲ್ ಅವರನ್ನು ಸೋಲಿಸಲು ಶತಾಯ ಗತಾಯ ಪ್ರಯತ್ನಿಸುತ್ತಿರುವ ಅಮಿತ್ ಶಾ, ಶಾಸಕರನ್ನು ಖರೀದಿಸುವುದು ಅಲ್ಲದೇ ಜೀವಬೆದರಿಕೆಯೊಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ರಾಹುಲ್ ಗಾಂಧಿ ಪ್ರಧಾನಿ ಮೋದಿ ಅಮಿತ್ ಶಾ ಕಲ್ಲು ತೂರಾಟ Rahul Gandhi Pm Modi Amit Sha Stone Pelting

ಸುದ್ದಿಗಳು

news

ಬಿಜೆಪಿ ಭ್ರಷ್ಟಾಚಾರ ವಿರುದ್ಧದ ಪಕ್ಷ: ಆರ್.ಅಶೋಕ್

ಬೆಂಗಳೂರು: ಬಿಜೆಪಿ ಭ್ರಷ್ಟಾಚಾರ ವಿರುದ್ಧದ ಪಕ್ಷವಾಗಿದೆ. ಭ್ರಷ್ಟಾಚಾರವನ್ನು ಯಾವತ್ತೂ ಸಹಿಸೋಲ್ಲ ಎಂದು ...

news

ನಾಳೆ ಉಪರಾಷ್ಟ್ರಪತಿ ಚುನಾವಣೆ: ಬಹುತೇಕ ವೆಂಕಯ್ಯನಾಯ್ಡು ಆಯ್ಕೆ ಸಾಧ್ಯತೆ

ನವದೆಹಲಿ: ನಾಳೆ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಸಂಸತ್ ಸಂಪೂರ್ಣವಾಗಿ ಸಿದ್ದಗೊಂಡಿದೆ. ...

news

ಕಾಂಗ್ರೆಸ್ ಮುಖಂಡ ಕಾರ್ತಿ ಚಿದಂಬರಂಗೆ ಲುಕ್ಔಚ್ ನೋಟಿಸ್ ಜಾರಿ

ಚೆನ್ನೈ: ಫೇಮಾ ಕಾಯ್ದೆ ಉಲ್ಲಂಘನೆಯ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ವಿತ್ತ ಸಚಿವ ...

news

ಡಿ.ಕೆ. ಶಿವಕುಮಾರ್ ಮನೆ ಮೇಲಿನ ದಾಳಿ ರಾಜಕೀಯಪ್ರೇರಿತ: ಸಿಎಂ ಸಿದ್ದರಾಮಯ್ಯ

ಸಚಿವ ಡಿ.ಕೆ. ಶಿವಕುಮಾರ್ ಮನೆ ಮೇಲಿನ ಐಟಿ ದಾಳಿ ರಾಜಕೀಯಪ್ರೇರಿತ. ದಾಳಿಯ ಸಮಯವೂ ಸಹ ಇದೊಂದು ...

Widgets Magazine