ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಕಡು ಬಡವರಿಗೆ ವರ್ಷಕ್ಕೆ 72 ಸಾವಿರ ರೂ. ಆದಾಯ- ರಾಹುಲ್ ಗಾಂಧಿ ಆಶ್ವಾಸನೆ

ನವದೆಹಲಿ, ಮಂಗಳವಾರ, 26 ಮಾರ್ಚ್ 2019 (10:15 IST)

ನವದೆಹಲಿ : ಈ ಬಾರಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಕಡು ಬಡವರ  ಕುಟುಂಬಕ್ಕೆ ಪ್ರತಿ ತಿಂಗಳು 6 ಸಾವಿರ ರೂಗಳಂತೆ ವರ್ಷಕ್ಕೆ 72 ಸಾವಿರ ರೂ. ನೀಡಲಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಶ್ವಾಸನೆ ನೀಡಿದ್ದಾರೆ.


ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಧ್ಯಕ್ಷ ರಾಹುಲ್ ಗಾಂಧಿ, ‘ನ್ಯಾಯ’ ಯೋಜನೆ ಜಾರಿಗೆ ತರುವ ಮೂಲಕ ಬಡ ಕುಟುಂಬಕ್ಕೆ ತಿಂಗಳಿಗೆ 6 ಸಾವಿರದಂತೆ, ಅಂದರೆ ವಾರ್ಷಿಕ 72 ಸಾವಿರ ರೂ. ಆದಾಯವನ್ನು ನೀಡಲಾಗುತ್ತದೆ. ಯೋಜನೆಯಿಂದ ದೇಶದ 20% ರಷ್ಟು ಜನರಿಗೆ, ಅಂದರೆ 25 ಕೋಟಿ ಮಂದಿಗೆ ಅನುಕೂಲ ಆಗಲಿದೆ ಎಂದು ತಿಳಿಸಿದ್ದಾರೆ.


ಜಗತ್ತಿನ ಅತಿ ದೊಡ್ಡ ಕನಿಷ್ಠ ಆದಾಯ ಯೋಜನೆ ಇದಾಗುತ್ತದೆ. ಅಲ್ಲದೇ ಗಬ್ಬರ್ ಸಿಂಗ್ ಟ್ಯಾಕ್ಸ್ ಪದ್ಧತಿಯನ್ನು ರದ್ದುಗೊಳಿಸಿ, ಜಿಎಸ್‍ಟಿ ಸರಳೀಕರಣ ಮಾಡಲಾಗುವುದು. ಈ ಮೂಲಕ ದೇಶದ ಸಣ್ಣ ಮತ್ತು ಮಧ್ಯಮ ವರ್ಗದ ಉದ್ಯಮಗಳನ್ನು ಮರು ಸ್ಥಾಪಿಸಿ ಆ ಮೂಲಕ ಉದ್ಯೋಗ ಅವಕಾಶ ಹೆಚ್ಚಿಸಲಾಗುವುದು. ದೇಶದ ಸ್ವಾವಲಂಬಿ ಬದುಕಿನ ಸಾಮಥ್ರ್ಯ ಹೆಚ್ಚಸುವ ಉದ್ದೇಶದಿಂದ ಕೇಂದ್ರ ಸರ್ಕಾರಿ ಕೆಲಸ ಹಾಗೂ ಪಿಎಸ್‍ಯುಎಸ್ ನಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಜೆಡಿಎಸ್ ತಾನೂ ಹಾಳಾಗುತ್ತೆ, ಕಾಂಗ್ರೆಸ್ಸನ್ನೂ ಹಾಳು ಮಾಡುತ್ತಿದೆ- ಪ್ರಹ್ಲಾದ್ ಜೋಶಿ ವ್ಯಂಗ್ಯ

ವಿಜಯಪುರ : ಜೆಡಿಎಸ್ ತಾನೂ ಹಾಳಾಗುತ್ತೆ, ಕಾಂಗ್ರೆಸ್ಸನ್ನೂ ಹಾಳು ಮಾಡುತ್ತಿದೆ ಎಂದು ಬಿಜೆಪಿ ಮುಖಂಡ, ಸಂಸದ ...

news

ತೇಜಸ್ವಿ ಸೂರ್ಯಗೆ ಬೆಂ. ದಕ್ಷಿಣ ಟಿಕೆಟ್: ಸಿಡಿದೆದ್ದ ಬಿಜೆಪಿ ಕಾರ್ಯಕರ್ತರಿಗೆ ತೇಜಸ್ವಿನಿ ಅನಂತಕುಮಾರ್ ಹೇಳಿದ್ದೇನು?

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಟಿಕೆಟ್ ಯಾರಿಗೆ ಎನ್ನುವುದು ಕೊನೆಗೂ ಫೈನಲ್ ಆಗಿದೆ. ...

news

ಮುಖ್ಯಮಂತ್ರಿ ವಿರುದ್ಧ ಸಿಡಿದೆದ್ದ ಸುಮಲತಾ ಆಯೋಗಕ್ಕೆ ದೂರು

ಮಂಡ್ಯ: ಮಂಡ್ಯ ಲೋಕಸಭೆ ಚುನಾವಣಾ ಕಣ ರಂಗೇರುತ್ತಿದ್ದು, ತಮ್ಮ ವಿರುದ್ಧ ಪರೋಕ್ಷ ಸಮರ ಸಾರಿರುವ ಸಿಎಂ ...

news

ಯೂ ಟರ್ನ್ ಹೊಡೆದ ಜನಾರ್ಧನ್ ಪೂಜಾರಿ

ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಖಚಿತವಾಗಿದೆ ...

Widgets Magazine