Widgets Magazine
Widgets Magazine

ಸುಪ್ರೀಂಕೋರ್ಟ್ ಮಹತ್ವದ ತೀರ್ಪು; ಹೆಣ್ಣು ಮಕ್ಕಳಿಗೆ ಸಮಾನ ಆಸ್ತಿ ಹಕ್ಕು

ನವದೆಹಲಿ, ಭಾನುವಾರ, 4 ಫೆಬ್ರವರಿ 2018 (13:29 IST)

Widgets Magazine

ನವದೆಹಲಿ: ಪುರುಷರು ಮತ್ತು ಮಹಿಳೆಯರ ಮಧ್ಯೆ ಸಮಾನತೆ ಕಾಯ್ದು ಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪೊಂದನ್ನು ಹೊರಡಿಸಿದೆ. ಹಿಂದೂ ಉತ್ತರಾಧಿಕಾರ (ತಿದ್ದುಪಡಿ) ಕಾಯ್ದೆ 2005, ಪಿತ್ರಾರ್ಜಿತ ಆಸ್ತಿಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಸಮಾನ ಹಕ್ಕನ್ನು ನೀಡುತ್ತದೆ. 2005ರಲ್ಲಿ ಕಾಯ್ದೆಗೆ ತಿದ್ದುಪಡಿ ಮಾಡುವುದಕ್ಕೆ ಮೊದಲು ಹುಟ್ಟಿದವರು

 
ಅಥವಾ ನಂತರ ಹುಟ್ಟಿದವರು ಎಂಬ ಯಾವುದೇ ತಾರತಮ್ಯಕ್ಕೆ ಇಲ್ಲಿ ಅವಕಾಶ ಇಲ್ಲ. ಒಡಹುಟ್ಟಿದವರು ಎಂಬ ಅಂಶವೇ ಗಂಡು ಮತ್ತು ಹೆಣ್ಣು ಮಕ್ಕಳಿಬ್ಬರಿಗೂ ಸಮಾನ ಹಕ್ಕನ್ನು ನೀಡುತ್ತದೆ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ.


2005ಕ್ಕೂ ಮೊದಲು ಮಹಿಳೆ ಜನಿಸಿದ್ದಳು ಎಂಬ ಕಾರಣಕ್ಕೆ ತವರು ಮನೆ ಆಸ್ತಿಯಲ್ಲಿ ಪಾಲು ನೀಡದೇ ಇರಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ. ತಂದೆಯ ಆಸ್ತಿಯಲ್ಲಿ ಸಮಾನ ಪಾಲು ಆಗ್ರಹಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದ ಕರ್ನಾಟಕದ ಬಾಗಲಕೋಟೆಯ ಇಬ್ಬರು ಸೋದರಿಯರ ಪ್ರಕರಣದಲ್ಲಿ ಪೀಠ ಈ ತೀರ್ಪು ನೀಡಿದೆ.  ಈ ಸಂಬಂಧ ರಾಜ್ಯ ಹೈಕೋರ್ಟ್‌ ಆದೇಶ ತಳ್ಳಿಹಾಕಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಸುಪ್ರೀಂಕೋರ್ಟ್ ತೀರ್ಪು ಹೆಣ್ಣುಮಕ್ಕಳು ಆಸ್ತಿ ಕರ್ನಾಟಕ ಬಾಗಲಕೋಟೆ ಗಂಡು ಪಾಲು Judgement Girls Property Karnataka Bagalkote Boys Share Suprime Court

Widgets Magazine

ಸುದ್ದಿಗಳು

news

ಕರ್ನಾಟಕಕ್ಕೆ ಯಾರೂ ಬರಬೇಡಿ ಎಂದು ನಾವು ಹೇಳಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪರಿವರ್ತನಾ ರ್ಯಾಲಿ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ ...

news

ಪ್ರಧಾನಿ ಮೋದಿ ಸ್ವಾಗತಕ್ಕೆ ಸಿಎಂ ಸಿದ್ದರಾಮಯ್ಯ ಹೋಗಲ್ಲ

ಬೆಂಗಳೂರು: ಇಂದು ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಸ್ವಾಗತಕ್ಕೆ ಸಿಎಂ ಸಿದ್ದರಾಮಯ್ಯ ಖುದ್ದಾಗಿ ...

news

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪದಲ್ಲಿ ತಪ್ಪಿದ ಅನಾಹುತ

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಕಾರ್ಯಕ್ರಮಕ್ಕೆ ಅಡುಗೆ ಸಿದ್ಧಪಡಿಸುವಾಗ ಗ್ಯಾಸ್ ಲೀಕ್ ಆಗಿದ್ದು, ...

news

ಬಿಜೆಪಿ ಸೇರಿದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್

ವಿಧಾನಸೌದದಲ್ಲಿ ಅಂಗಿ ಹರಿದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅವರು ಬಿಜೆಪಿ ...

Widgets Magazine Widgets Magazine Widgets Magazine