ನಾನು ಸಿಎಂ ಅಭ್ಯರ್ಥಿ ಅಲ್ಲ: ಕೇಜ್ರಿವಾಲ್

ಪಟಿಯಾಲ, ಗುರುವಾರ, 12 ಜನವರಿ 2017 (08:21 IST)

Widgets Magazine

ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ತಮ್ಮ ಪಕ್ಷದ ಅಭ್ಯರ್ಥಿ ಪಂಜಾಬ್‌ನವರೇ ಆಗಿರುತ್ತಾರೆ ಎಂದು ನವದೆಹಲಿ ಮುಖ್ಯಮಂತ್ರಿ ,ಆಪ್ ನಾಯಕ ಅರವಿಂದ ಕೇಜ್ರಿವಾಲ್ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ತಾವು ಮುಖ್ಯಮಂತ್ರಿ ಅಭ್ಯರ್ಥಿ ಎಂದ ವದಂತಿಗಳಿಗೆ ತೆರೆ ಎಳೆದಿದ್ದಾರೆ.
ನವದೆಹಲಿಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಕ್ಷ ಇತರ ರಾಜ್ಯಗಳಲ್ಲಿ ಸಹ ತನ್ನ ಛಾಪನ್ನು ಮೂಡಿಸಲು ಸತಾಯಗತಾಯ ಪ್ರಯತ್ನಿಸುತ್ತಿದೆ. ಅದರಲ್ಲೂ ಪಂಜಾಬ್‌ನಲ್ಲಿ ಆಪ್ ಪ್ರಭಾವ ಹೆಚ್ಚುತ್ತಿದ್ದು ಅಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಯಾರನ್ನು ಘೋಷಿಸಬೇಕು ಎಂದು ಆಪ್ ತಲಾಶ್ ನಡೆಸುತ್ತಿದೆ.
 
ಅದರ ಮಧ್ಯೆ ಆಪ್ ರಾಷ್ಟ್ರೀಯ ಸಂಚಾಲಕ, ನವದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರೇ ಪಂಜಾಬ್‌ನಲ್ಲಿ ತಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಗುಸುಗುಸು ಶುರುವಾಗಿತ್ತು.
 
ಮೊಹಾಲಿಯಲ್ಲಿ ನಡೆದ ಪಕ್ಷದ ರ‍್ಯಾಲಿಯನ್ನುದ್ದೇಶಿಸಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆಡಿರುವ ಮಾತುಗಳು ಇದಕ್ಕೆ ಮತ್ತಷ್ಟು ಇಂಬು ನೀಡಿದ್ದವು. ಅರವಿಂದ ಕೇಜ್ರಿವಾರ್ ಪಂಜಾಬ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಭಾವಿಸಿಕೊಂಡು ನಮ್ಮ ಪಕ್ಷಕ್ಕೆ ಮತ ಚಲಾಯಿಸಿ ಎಂದು ಹೇಳುವ ಮೂಲಕ ಸಿಸೋಡಿಯಾ ರಾಜಕೀಯ ವಲಯದಲ್ಲಿ ಹೊಸ ಕುತೂಹಲವನ್ನು ತಂದಿಟ್ಟಿದ್ದರು. 
 
ಇದಕ್ಕೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್  ಮತ್ತು ಶಿರೋಮಣಿ ಅಕಾಲಿ ದಳ, ಆಪ್ ಪಂಜಾಬ್ ಮೇಲೆ ಹೊರಗಿನವರನನ್ನು 
ಹೇರಲು ಪ್ರಯತ್ನಿಸುತ್ತಿದೆ ಎಂದಿದ್ದವು. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಅಭ್ಯರ್ಥಿ ಕೇಜ್ರಿವಾಲ್ ಪಂಜಾಬ್ ಚುನಾವಣೆ Kejriwal Punjab Cm Post

Widgets Magazine

ಸುದ್ದಿಗಳು

news

ಕ್ರಿಯಾ ಸಮಾಧಿ ಸಂಪ್ರದಾಯದಂತೆ ಗೌರಿಶಂಕರ ಸ್ವಾಮೀಜಿ ಅಂತಿಮ ಸಂಸ್ಕಾರ

ನಿನ್ನೆ ಲಿಂಗೈಕ್ಷರಾದ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರ ಮಾಜಿ ಶಿಷ್ಯ ಗೌರಿಶಂಕರ ಸ್ವಾಮೀಜಿ ...

news

ಸಂಸದ ಅನಂತ್ ಕುಮಾರ್ ಹೆಗಡೆ ನಾಪತ್ತೆ: ಬಂಧನಕ್ಕೆ ಪೊಲೀಸರ ಬಲೆ

ವೈದ್ಯರ ಮೇಲೆ ಹಲ್ಲೆ ಮಾಡಿ ಗೂಂಡಾವರ್ತನೆ ತೋರಿದ್ದ ಸಂಸದ ಅನಂತ್ ಕುಮಾರ್ ಹೆಗಡೆ ನಾಪತ್ತೆಯಾಗಿದ್ದು, ಸಂಸದರ ...

news

ಅಮಾನತಿಗೆ ಹೆದರುವ ಪ್ರಶ್ನೆಯೇ ಇಲ್ಲ: ಬಿಜೆಪಿಗೆ ಸೆಡ್ಡುಹೊಡೆದ ಮಾಜಿ ಮೇಯರ್

ಪಕ್ಷದಿಂದ ಅಮಾನತು ಮಾಡಿರುವುದರಿಂದ ಹೆದರುವ ಪ್ರಶ್ನೆಯೇ ಇಲ್ಲ ಎಂದು ರಾಯಣ್ಣ ಬ್ರಿಗೇಡ್‌ನ ರಾಜ್ಯ ಪ್ರಧಾನ ...

news

ರಾಯಣ್ಣ ಬ್ರಿಗೇಡ್‌ನಿಂದ ಬಿಜೆಪಿಗೆ ಧಕ್ಕೆಯಿಲ್ಲ: ಶೋಭಾ ಕರಂದ್ಲಾಜೆ

ರಾಯಣ್ಣ ಬ್ರಿಗೇಡ್‌ನಿಂದ ಬಿಜೆಪಿ ಪಕ್ಷದ ಮೇಲೆ ಯಾವುದೇ ರೀತಿಯ ಪರಿಣಾಮ ಬಿರುವುದಿಲ್ಲ. ಈ ಕುರಿತು ಪಕ್ಷದ ...

Widgets Magazine