ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಸರಕಾರಕ್ಕೆ 19 ಶಾಸಕರು ನೀಡಿರುವ ಬೆಂಬಲ ವಾಪಸ್ ಪಡೆಯುವ ನಿರ್ಧಾರದ ಬಗ್ಗೆ ರಾಜ್ಯಪಾಲರು ಸೂಕ್ತ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ ಉಚ್ಚಾಟಿತ ನಾಯಕ ಟಿಟಿವಿ ದಿನಕರನ್, ವಿ.ಕೆ.ಶಶಿಕಲಾರನ್ನು ಪಕ್ಷದಿಂದ ಉಚ್ಚಾಟಿಸುವವರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.