Widgets Magazine
Widgets Magazine

2 ರೂಪಾಯಿಗಳಿಗಾಗಿ ಮಾಲೀಕನಿಗೆ ಚಾಕುವಿನಿಂದ ಇರಿದ ಗ್ರಾಹಕ

ಲೂಧಿಯಾನಾ, ಮಂಗಳವಾರ, 25 ಜುಲೈ 2017 (13:30 IST)

Widgets Magazine

ಅಂಗಡಿ ಮಾಲೀಕನೊಂದಿಗೆ ನಡೆದ ಎರಡು ರೂಪಾಯಿಗಳ ಜಗಳದಲ್ಲಿ ಅಪರಿಚಿತ ಗ್ರಾಹಕನೊಬ್ಬ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ವರದಿಯಾಗಿದೆ.
 
ಗಾಯಗೊಂಡ ಮಾಲೀಕ ರೋಹಿತ್‌ ಕುಮಾರ್‌ನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
 
ಅಪರಿಚಿತ ಗ್ರಾಹಕನೊಬ್ಬ ಸೀಗರೇಟು ಕೊಡುವಂತೆ 10 ರೂಪಾಯಿಗಳನ್ನು ಅಂಗಡಿ ಮಾಲೀಕನಿಗೆ ನೀಡಿದ್ದಾನೆ. ಆದರೆ, ಸಿಗರೇಟು ಮೌಲ್ಯ 12 ರೂಪಾಯಿಗಳಾಗಿದ್ದರಿಂದ ಇನ್ನೆರೆಡು ರೂಪಾಯಿ ಕೊಡುವಂತೆ ಮಾಲೀಕ ಕೇಳಿದ್ದಾನೆ. ಆದರೆ, ಕೊಡಲು ನಿರಾಕರಿಸಿದ್ದಾನೆ. ಇಬ್ಬರ ನಡುವೆ ವಾಗ್ವಾದ ನಡೆದಿದೆ. ವಾಗ್ವಾದ ವಿಕೋಪಕ್ಕೆ ತೆರಳಿದಾಗ ಗ್ರಾಹಕ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಅಪರಿಚಿತ ಗ್ರಾಹಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಆರೋಪಿಯ ಪತ್ತೆಗಾಗಿ ಜಾಲ ಬೀಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿರುವ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

14ನೇ ರಾಷ್ಟ್ರಪತಿಯಾಗಿ ರಾಮನಾಥ ಕೋವಿಂದ್ ಪ್ರಮಾಣ ವಚನ ಸ್ವೀಕಾರ

ದೇಶದ 14ನೇ ರಾಷ್ಟ್ರಪತಿಯಾಗಿ ರಾಮನಾಥ ಕೋವಿಂದ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಸತ್ ಭವನದ ಸೆಂಟ್ರಲ್ ...

news

ಚೀನಾ ಪರ ನಿಂತ ಲಷ್ಕರ್ ಉಗ್ರರು: ಭಾರತದ ವಿರುದ್ಧ ಯುದ್ದಕ್ಕೆ ಕರೆ

ಗಡಿಯಲ್ಲಿ ಚೀನಾ ಭಾರತದ ವಿರುದ್ಧ ಮುಗಿಬೀಳುಲು ಸಜ್ಜಾಗಿರುವ ಬೆನ್ನಲ್ಲೇ ಪಾಕಿಸ್ತಾನ ಕೃಪಾಪೋಷಿತ ನಿಷೇಧಿತ ...

news

ಖ್ಯಾತ ವಿಜ್ಞಾನಿ, ಶಿಕ್ಷಣ ತಜ್ಞ, ಪ್ರೊಫೆಸರ್‌ ಯಶ್‌ ಪಾಲ್‌ ವಿಧಿವಶ

ಖ್ಯಾತ ವಿಜ್ಞಾನಿ, ಶಿಕ್ಷಣ ತಜ್ಞ, ಪದ್ಮ ವಿಭೂಷಣ ಪುರಸ್ಕೃತ ಪ್ರೊಫೆಸರ್‌ ಯಶ್‌ ಪಾಲ್‌ ಅವರು ...

news

ಇಂದು ದೇಶದ 14ನೇ ರಾಷ್ಟ್ರಪತಿಯಾಗಿ ರಾಮನಾಥ ಕೋವಿಂದ್ ಪ್ರಮಾಣವಚನ

ಎನ್ ಡಿಎಯಿಂದ ರಾಷ್ಟ್ರಪತಿ ಹುದ್ದೆಗೆ ಆಯ್ಕೆಯಾಗಿರುವ ರಾಮನಾಥ ಕೋವಿಂದ್ ಇಂದು ದೇಶದ 14ನೇ ...

Widgets Magazine Widgets Magazine Widgets Magazine