ಬಿಹಾರದಲ್ಲಿ ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರ: ಬೆಳಿಗ್ಗೆ 10ಕ್ಕೆ ಬಿಹಾರ ಸಿಎಂ ಆಗಿ ಪದಗ್ರಹಣ ಮಾಡಲಿರುವ ನಿತೀಶ್

ಪಾಟ್ನಾ, ಗುರುವಾರ, 27 ಜುಲೈ 2017 (07:10 IST)

ಪಾಟ್ನಾ: ಆರ್‌ಜೆಡಿ, ಕಾಂಗ್ರೆಸ್ ಜತೆಗಿನ ಮಹಾಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಿತೀಶ್ ಕುಮಾರ್, ಎನ್ ಡಿಎ ಕೂಟ ಸೇರಿದ್ದು, ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಇಂದು ನಿತೀಶ್ ಕುಮಾರ್ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ.
 
ತಡರಾತ್ರಿ ನಡೆದ ದಿಢೀರ್‌ ಬೆಳವಣಿಗೆಯಲ್ಲಿ ಸರ್ಕಾರ ರಚನೆಗೆ ಹಕ್ಕು ಪ್ರತಿಪಾದಿಸಲು ಆರ್‌ಜೆಡಿಗೆ ಅವಕಾಶ ದೊರೆಯದಂತೆ  ಮಾಡಲು ಇಂದು ಬೆಳಿಗ್ಗೆ 10ಗಂಟೆಗೇ ನಿತೀಶ್‌ ಕುಮಾರ್‌ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವುದು ನಿರ್ಧಾರವಾಗಿದೆ. ಅಲ್ಲದೇ ನಿತೀಶ್ ನೇತೃತ್ವದ ಹೊಸ ಸರ್ಕಾರ ರಚನೆಗೆ ಬಿಜೆಪಿ ಬೆಂಬಲಪತ್ರವನ್ನು ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರಿಗೆ ಸಲ್ಲಿಸಿದೆ. 
 
ಅಲ್ಲದೇ ತಡರಾತ್ರಿ ರಾಜ್ಯಪಾಲರನ್ನು ಭೇಟಿಯಾದ ಉಭಯ ಬಣಗಳ ಮುಖಂಡರು ಜೆಡಿಯು–ಬಿಜೆಪಿ ಮೈತ್ರಿಕೂಟಕ್ಕೆ 132 ಶಾಸಕರ ಬೆಂಬಲ ಇದ್ದು, ಸರ್ಕಾರ ರಚಿಸಲು ಆಹ್ವಾನ ನೀಡಬೇಕು ಎಂದು ಮನವಿ ಮಾಡಿದರು. ಇನ್ನು ಹೊಸ ಸರ್ಕಾರದಲ್ಲಿ ಸುಶೀಲ್‌ ಮೋದಿ ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿದೆ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿಯವರು ಜಾತಿವಾದಿಗಳಾಗಿದ್ದರಿಂದ ಜಾತಿ ರಾಜಕಾರಣ: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಬಿಜೆಪಿಯವರು ಜಾತಿವಾದಿಗಳಾಗಿದ್ದರಿಂದ ಜಾತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಿಎಂ ...

news

ನಿತೀಶ್ ಕುಮಾರ್‌ಗೆ ಗಲ್ಲು ಶಿಕ್ಷೆಯಾಗಬಹುದು: ಲಾಲು ಯಾದವ್

ಪಾಟ್ನಾ: ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ 1991ರಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಹತ್ಯೆ ...

news

ತಂದೆಯನ್ನು ಹತ್ಯೆಗೈದವನನ್ನು 20 ವರ್ಷಗಳ ನಂತ್ರ ಕೊಂದ ಪುತ್ರ

ಗುರುಗ್ರಾಮ: ಮೈದಾವಾಸ್ ಗ್ರಾಮದಲ್ಲಿ ಇಪ್ಪತ್ತು ವರ್ಷಗಳ ಹಿಂದೆ ಎರಡು ಕುಟುಂಬಗಳ ನಡುವೆ ನಡೆದ ಹಳೆಯ ...

news

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರದ ಜೆಡಿಯು ಮತ್ತು ಆರ್`ಜೆಡಿ ನಡುವಿನ ಮಹಾಮೈತ್ರಿ ಮುರಿದು ಬಿದ್ದಿದೆ. ಮಹತ್ವದ ರಾಜಕೀಯ ...

Widgets Magazine