ಮನೆಕೆಲಸದಾಕೆಯ ಮೇಲೆ ಅತ್ಯಾಚಾರವೆಸಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಚಿತ್ರನಿರ್ಮಾಪಕ ಅರೆಸ್ಟ್

ನೋಯ್ಡಾ, ಗುರುವಾರ, 5 ಅಕ್ಟೋಬರ್ 2017 (12:58 IST)

ಮನೆಕೆಲಸದಾಕೆಯ ಮೇಲೆ ಅತ್ಯಾಚಾರವೆಸಗಿ, ಅತ್ಯಾಚಾರವೆಸಗುತ್ತಿರುವ ದೃಶ್ಯಗಳ ಅಶ್ಲೀಲ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಚಿತ್ರನಿರ್ಮಾಪಕನನ್ನು ಪೊಲೀಸರು ಬಂಧಿಸಿದ್ದಾರೆ. 
ನೋಯ್ಡಾದ ಸೆಕ್ಟರ್ 15-ಇ-ಬ್ಲಾಕ್‌ನಲ್ಲಿ ನಿನ್ನೆ ರಾತ್ರಿ ಮನೆಕೆಲಸದಾಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರವೆಸಗಿದ ನಂತರ ಅಶ್ಲೀಲ ವಿಡಿಯೋ ಮಾಡಿ ಯಾರಿಗಾದರೂ ಘಟನೆಯ ಬಗ್ಗೆ ಬಹಿರಂಗಪಡಿಸಿದಲ್ಲಿ ಇಂಟರ್‌ನೆಟ್‌ನಲ್ಲಿ ಹಾಕುವುದಾಗಿ ಬೆದರಿಕೆಯೊಡ್ಡಿದ್ದಾನೆ ಎಂದು ಅತ್ಯಾಚಾರಕ್ಕೊಳಗಾದ ಮಹಿಳೆಯ ಪತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.  
 
ಆರೋಪಿ ಚಿತ್ರನಿರ್ಮಾಪಕ, ಸಿನೆಮಾ, ಜಾಹೀರಾತುಗಳಲ್ಲಿ ಕೆಲಸ ಮಾಡಿದ್ದಲ್ಲದೇ ಪ್ರಮುಖ ಚಾನಲ್‌ಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಅನಿಲ್ ಕುಮಾರ್ ಶಾಹಿ ತಿಳಿಸಿದ್ದಾರೆ. 
 
ಅತ್ಯಾಚಾರಕ್ಕೊಳಗಾದ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  
ಚಿತ್ರನಿರ್ಮಾಪಕ ನೋಯ್ಡಾ ಟಿವಿ ನಿರ್ಮಾಪಕ ಎಂಎಂಎಸ್ ರೇಪ್ ಬ್ಲ್ಯಾಕ್‌‌ಮೇಲ್ Noida Rape Blackmail Mms Clip Film Producer Tv Producer

ಸುದ್ದಿಗಳು

news

ಚಾಮರಾಜಪೇಟೆಯಲ್ಲಿ ಡಬ್ಬಾ ಹೊರುತ್ತಿದ್ದವ ಜಮೀರ್ ಅಹಮ್ಮದ್: ಎಚ್ ಡಿ ರೇವಣ್ಣ

ಬೆಂಗಳೂರು: ಜೆಡಿಎಸ್ ನಿಂದ ಉಚ್ಚಾಟನೆಗೊಂಡು ಕಾಂಗ್ರೆಸ್ ಸೇರಲು ಹೊರಟಿರುವ ಶಾಸಕ ಜಮೀರ್ ಅಹಮ್ಮದ್ ವಿರುದ್ಧ ...

news

ನಾ ಬಂದ್ರೆ ಜನ ಹುಚ್ಚೆದ್ದು ಕುಣಿಯುತ್ತಾರೆ: ಬಿಎಸ್ ಯಡಿಯೂರಪ್ಪ

ಬೆಂಗಳೂರು: ವಾಲ್ಮೀಕಿ ಜಯಂತಿ ದಿನವಾದ ಇಂದು ಸಿಎಂ ಸಿದ್ದರಾಮಯ್ಯ ವಿಧಾನಸೌಧದ ಮುಂಭಾಗದಲ್ಲಿ ವಾಲ್ಮೀಕಿ ...

news

‘ಸಿಎಂ ಸಿದ್ದರಾಮಯ್ಯ ಕಿಕ್ ಬ್ಯಾಕ್ ರಾಜಕಾರಣಿ’

ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ನಂತರ ಮೈಸೂರಿಗೆ ಅತೀ ಹೆಚ್ಚು ಅನುದಾನ ನೀಡಿದವನು ನಾನೇ ಎಂದು ...

news

ಸಿಸಿಬಿ ಪೊಲೀಸರಿಂದ ಗೀತಾ ವಿಷ್ಣು ಫುಲ್ ಡ್ರಿಲ್

ಬೆಂಗಳೂರು: ಟಿಟಿಡಿ ಮಾಜಿ ಅಧ್ಯಕ್ಷ ದಿ. ಆದಿಕೇಶವುಲು ಮೊಮ್ಮಗ ಗೀತಾ ವಿಷ್ಣು ಕಾರು ಅಪಘಾತ ಪ್ರಕರಣಕ್ಕೆ ...

Widgets Magazine
Widgets Magazine