Widgets Magazine
Widgets Magazine

ಮನೋಹರ್ ಪರಿಕ್ಕರ್ ಸಿಎಂ ಆಸೆಗೆ ಕಾಂಗ್ರೆಸ್ ಕೊಕ್ಕೆ

ನವದೆಹಲಿ(, ಮಂಗಳವಾರ, 14 ಮಾರ್ಚ್ 2017 (10:13 IST)

Widgets Magazine

ನವದೆಹಲಿ(ಮಾ.14): ರಕ್ಷಣಾ ಖಾತೆ ತೊರೆದಿರುವ ಮನೋಹರ್ ಪರಿಕ್ಕರ್ ಗೋವಾ ಸಿಎಂ ಆಗಿಯೇ ಬಿಟ್ಟರೂ ಎನ್ನುವಷ್ಟರಲ್ಲಿ ಗೋವಾ ರಾಜಕೀಯಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಬಿಜೆಪಿಯನ್ನ ಸರ್ಕಾರ ರಚನೆಗೆ ಆಹ್ವಾನಿಸಿದ ಗವರ್ನರ್ ಮೃದುಲಾ ಸಿನ್ಹಾ ನಿರ್ಧಾರ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.


ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದ ಏಕೈಕ ದೊಡ್ಡ ಪಕ್ಷಕ್ಕೆ ಸರ್ಕಾರ ರಚನೆಗೆ ಮೊದಲ ಅವಕಾಶ ನೀಡಬೇಕು. ಆದರೆ, ಗವರ್ನರ್ 2ನೇ ಸ್ಥಾನದಲ್ಲಿರುವ ಬಿಜೆಪಿಗೆ ಅವಕಾಶ ಕಲ್ಪಿಸಿರುವುದು ಕಾನೂನು ಬಾಹಿರ ಎಂದು ಕಾಂಗ್ರೆಸ್ ವಾದಿಸಿದ್ದು, ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿಸಿದೆ.

ಸುಪ್ರೀಂಕೋರ್ಟ್`ನಲ್ಲಿ ಇಂದು ಅರ್ಜಿ ವಿಚಾರಣೆಗೆ ಬರುತ್ತಿದ್ದು, ರಾಜಕೀಯವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದೆ. ಇಂದು ಸಂಜೆ 5 ಗಂಟೆಗೆ ಯೋಜಿಸಲಾಗಿರುವ ಮನೋಹರ್ ಪರಿಕ್ಕರ್ ಪ್ರಮಾಣವಚನ ಕಾರ್ಯಕ್ರಮವನ್ನೂ ರದ್ದುಗೊಳಿಸುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಚಂದ್ರಕಾಂತ್ ಕಾವ್ಳೇಕರ್ ಕೋರಿದ್ದಾರೆ.

40 ಸದಸ್ಯ ಬಲದ ಗೋವಾದ ವಿಧಾನಸಭೆಯಲ್ಲಿ ಕಾಂಗ್ರೆಸ್ 17 ಸ್ಥಾನ ಗೆದ್ದಿದ್ದರೆ, ಬಿಜೆಪಿ ಕೇವಲ 13 ಸ್ಥಾನ ಗೆದ್ದಿದೆ. ಇತರರು 10 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
 Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ಇಳಿಕೆ..?

ದೇಶದ ಜನರಿಗೆ ನಾಳೆ ಶುಭಸುದ್ದಿ ಸಿಗುವ ಸಾಧ್ಯತೆ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ...

news

ಪಿಯು ಪರೀಕ್ಷೆ ಅಕ್ರಮ ಎಸಗಿದ ಮೂವರ ವಿರುದ್ಧ ಕೇಸ್: ತನ್ವೀರ್ ಸೇಠ್

ರಾಯಚೂರಿನಲ್ಲಿ ಪಿಯು ಸಿಯ ಲೆಕ್ಕಶಾಸ್ತ್ರ ಪ್ರಶ್ನೆಪತ್ರಿಕೆ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ವಿ ...

news

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್

ಬೆಂಗಳೂರು: ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ, ಬ್ರಹ್ಮಿಣಿ ಸ್ಟೀಲ್ಸ್‌ ಕಂಪೆನಿಯ ವಿರುದ್ಧದ ...

news

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಜಾರಿನಿರ್ದೇಶನಾಲಯ ಜಪ್ತಿ ಮಾಡಿದ್ದ 900 ಕೋಟಿ ...

Widgets Magazine Widgets Magazine Widgets Magazine