ಕತುವಾ ಹಾಗೂ ಉನ್ನಾವ್ ಅತ್ಯಾಚಾರ ಪ್ರಕರಣದ ಬಗ್ಗೆ ಕೊನೆಗೂ ಮಾತನಾಡಿದ ಪ್ರಧಾನಿ ಮೋದಿ

ನವದಿಲ್ಲಿ, ಶನಿವಾರ, 14 ಏಪ್ರಿಲ್ 2018 (07:51 IST)

ನವದಿಲ್ಲಿ : ದೇಶದಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿರುವ ಕತುವಾ ಹಾಗೂ ಉನ್ನಾವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಭಾರೀ ಟೀಕೆಗೆ ಗುರಿಯಾಗಿದ್ದು, ಕೊನೆಗೂ ಪ್ರಧಾನಿ ಮೋದಿ ಅವರು ಈ ಬಗ್ಗೆ ಮಾತನಾಡಿದ್ದಾರೆ.


ಜಮ್ಮು ಮತ್ತು ಕಾಶ್ಮೀರದ ಕತುವಾ ಎಂಬಲ್ಲಿ 6 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಹತ್ಯೆಗೈಯಲಾಗಿದ್ದು, ಬಿಜೆಪಿ ಮುಖಂಡರು ಆರೋಪಿಗಳ ರಕ್ಷಣೆಗೆ ನಿಂತಿರುವುದು ಒಂದು ಕಡೆಯಾದರೆ  ಉತ್ತರ ಪ್ರದೇಶದಲ್ಲಿ ಉನ್ನಾವ್ ಎಂಬಲ್ಲಿ ಯುವತಿಯ ಮೇಲೆ ಬಿಜೆಪಿ ಶಾಸಕ ಅತ್ಯಾಚಾರ ನಡೆಸಿರುವ ಬಗ್ಗೆ ದೂರು ದಾಖಲಾಗಿರುವುದು ಇನ್ನೊಂದು ಕಡೆ.  ಆದರೆ ಪ್ರಧಾನಿ ಮೋದಿ ಅವರು ಮಾತ್ರ ಈ ಬಗ್ಗೆಯಾವುದೇ ರೀತಿಯಾದ ಪ್ರತಿಕ್ರಿಯೆ ನೀಡಿರಲಿಲ್ಲ.


ಆದರೆ ಇದೀಗ ಮಾಡಿದ ಭಾಷಣವೊಂದರಲ್ಲಿ, ಕತುವಾ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳ ಬಗ್ಗೆ ಮಾತನಾಡಿದ ಅವರು,’ ಕಳೆದೆರಡು ದಿನಗಳಿಂದ ಚರ್ಚೆಯಾಗುತ್ತಿರುವ ವಿಷಯಗಳು ನಾಗರೀಕ ಸಮಾಜಕ್ಕೆ ತಕ್ಕುದ್ದಲ್ಲ. ಇಂತಹ ಘಟನೆಗಳು ಸಮಾಜಕ್ಕೆ, ದೇಶಕ್ಕೆ ನಾಚಿಕೆಗೇಡಿನ ವಿಷಯವಾಗಿದೆ. ನಮ್ಮ ಮಗಳ ಜೊತೆ ಈ ರೀತಿ ಬರ್ಬರವಾಗಿ ವರ್ತಿಸುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಈ ಸಂದರ್ಭದಲ್ಲಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿಎಂ ಸಿದ್ದು-ಮಲ್ಲಿಕಾರ್ಜುನ ಖರ್ಗೆ ಕಿತ್ತಾಟಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳು ಬಡವಾದರು!

ಬೆಂಗಳೂರು: ಎಲ್ಲಾ ಲೆಕ್ಕಾಚಾರದಂತೆ ನಡೆದಿದ್ದರೆ ಇಂದು ಕಾಂಗ್ರೆಸ್ ರಾಜ್ಯ ವಿಧಾನಸಭೆ ಚುನಾವಣೆಗೆ ಮೊದಲ ...

news

ಚುನಾವಣೆಗಾಗಿ ಹೊಸ ಮನೆ ಮಾಡಿಕೊಂಡ ಬಿಎಸ್ ವೈ ಪುತ್ರ!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ವಿರುದ್ಧ ವರುಣಾ ಕ್ಷೇತ್ರದಲ್ಲಿ ಬಿಜೆಪಿ ...

news

ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು – ಹೆಚ್.ಡಿ.ಕುಮಾರಸ್ವಾಮಿ ಭರವಸೆ

ಚಿತ್ರದುರ್ಗ : ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಹೆಚ್ ಡಿ ...

news

ಇಂದು ಸಂಜೆಯೊಳಗೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಇದುವರೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡದೇ ಇದ್ದ ...

Widgets Magazine
Widgets Magazine