Widgets Magazine
Widgets Magazine

14ನೇ ರಾಷ್ಟ್ರಪತಿಯಾಗಿ ರಾಮನಾಥ ಕೋವಿಂದ್ ಪ್ರಮಾಣ ವಚನ ಸ್ವೀಕಾರ

ನವದೆಹಲಿ, ಮಂಗಳವಾರ, 25 ಜುಲೈ 2017 (12:49 IST)

Widgets Magazine

ನವದೆಹಲಿ: ದೇಶದ 14ನೇ ರಾಷ್ಟ್ರಪತಿಯಾಗಿ ರಾಮನಾಥ ಕೋವಿಂದ್ ಸ್ವೀಕರಿಸಿದ್ದಾರೆ. ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
 
ಮಧ್ಯಾಹ್ನ 12.15ರ ಸಮಯದಲ್ಲಿ ಕೋವಿಂದ್ ಪ್ರಮಾಣವಚನ ಸ್ವೀಕರಿಸಿದ್ದು, ಈಶ್ವರನ ಹೆಸರಲ್ಲಿ ಸಂವಿಧಾನ ಬದ್ಧ ಅಧಿಕಾರವನ್ನು ಶ್ರದ್ಧಾಪೂರ್ವಕವಾಗಿ ಮತ್ತು ನಿಷ್ಪಕ್ಷಪಾತವಾಗಿ  ನಿರ್ವಹಣೆ ಮಾಡಲಿದ್ದೇನೆ ಎಂದು ತಿಳಿಸಿದ್ದಾರೆ. 
 
ಪ್ರಮಾಣವಚನ ಸ್ವೀಕಾರದ ಬಳಿಕ ಸಂಸತ್ ಆವರಣದ ಹೊರಗೆ ರಕ್ಷಣಾ ಸಿಬ್ಬಂದಿ 21 ಸುತ್ತು ಕುಶಾಲು ತೋಪು ಸಿಡಿಸುವ ಮೂಲಕ ನೂತನ ರಾಷ್ಟ್ರಪತಿಗಳಿಗೆ ಗೌರವ ರಕ್ಷೆ ನೀಡಲಾಯಿತು. ರಾಮನಾಥ್‌ ಕೋವಿಂದ್‌ ಪದಗ್ರಹಣ ಮಾಡುವುದಕ್ಕೂ ಮುನ್ನ ಕೋವಿಂದ್‌ ಅವರು ಪತ್ನಿ ಸಮೇತರಾಗಿ ರಾಜ್‌ಘಾಟ್‌‌ಗೆ ಭೇಟಿ ಕೊಟ್ಟು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಗೆ ನಮನ ಸಲ್ಲಿಸಿದರು. ಬಳಿಕ ರಾಷ್ಟ್ರಪತಿ ಭವನಕ್ಕೆ ಬಂದ ಕೋವಿಂದ್ ನಿರ್ಗಮಿತ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರೊಂದಿಗೆ ಕಾರಿನಲ್ಲಿ ಮೆರವಣಿಗೆ ಮೂಲಕ ಸಂಸತ್‌ ಭವನಕ್ಕೆ ಆಗಮಿಸಿದರು.
 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಚೀನಾ ಪರ ನಿಂತ ಲಷ್ಕರ್ ಉಗ್ರರು: ಭಾರತದ ವಿರುದ್ಧ ಯುದ್ದಕ್ಕೆ ಕರೆ

ಗಡಿಯಲ್ಲಿ ಚೀನಾ ಭಾರತದ ವಿರುದ್ಧ ಮುಗಿಬೀಳುಲು ಸಜ್ಜಾಗಿರುವ ಬೆನ್ನಲ್ಲೇ ಪಾಕಿಸ್ತಾನ ಕೃಪಾಪೋಷಿತ ನಿಷೇಧಿತ ...

news

ಖ್ಯಾತ ವಿಜ್ಞಾನಿ, ಶಿಕ್ಷಣ ತಜ್ಞ, ಪ್ರೊಫೆಸರ್‌ ಯಶ್‌ ಪಾಲ್‌ ವಿಧಿವಶ

ಖ್ಯಾತ ವಿಜ್ಞಾನಿ, ಶಿಕ್ಷಣ ತಜ್ಞ, ಪದ್ಮ ವಿಭೂಷಣ ಪುರಸ್ಕೃತ ಪ್ರೊಫೆಸರ್‌ ಯಶ್‌ ಪಾಲ್‌ ಅವರು ...

news

ಇಂದು ದೇಶದ 14ನೇ ರಾಷ್ಟ್ರಪತಿಯಾಗಿ ರಾಮನಾಥ ಕೋವಿಂದ್ ಪ್ರಮಾಣವಚನ

ಎನ್ ಡಿಎಯಿಂದ ರಾಷ್ಟ್ರಪತಿ ಹುದ್ದೆಗೆ ಆಯ್ಕೆಯಾಗಿರುವ ರಾಮನಾಥ ಕೋವಿಂದ್ ಇಂದು ದೇಶದ 14ನೇ ...

ಭಾರತ-ಚೀನಾ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ..?

ಡೊಕ್ಲಾಮ್ ಗಡಿ ವಿವಾದಕ್ಕೆ ತೆರೆ ಬೀಳುವ ಸಾಧ್ಯತೆಯಿದೆ ಎನ್ನಲಾಗುತ್ತಿದ್ದು, ಈ ನಿಟ್ಟಿನಲ್ಲಿ ಭಾರತದೊಂದಿಗೆ ...

Widgets Magazine