Widgets Magazine
Widgets Magazine

ಗುಜರಾತ್ ಕಾಂಗ್ರೆಸ್‌ನಲ್ಲಿ ಉಲ್ಬಣಿಸಿದ ಬಿಕ್ಕಟ್ಟು: 6 ಶಾಸಕರ ರಾಜೀನಾಮೆ

ವಡೋದರಾ, ಶುಕ್ರವಾರ, 28 ಜುಲೈ 2017 (16:26 IST)

Widgets Magazine

ಗುಜರಾತ್ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಉಲ್ಬಣಿಸಿದ್ದು ಮೂರು ದಿನಗಳಲ್ಲಿ ಆರು ಕಾಂಗ್ರೆಸ್ ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
 
ನಿನ್ನೆ ಮೂವರು ಶಾಸಕರು ರಾಜೀನಾಮೆ ನೀಡಿರುವುದು ಮಾಸುವ ಮುನ್ನವೇ ಇಂದು ಮತ್ತೆ ಮೂವರು ಕಾಂಗ್ರೆಸ್ ಶಾಸಕರು ಪಕ್ಷ ತ್ಯಜಿಸಿರುವುದು ಪಕ್ಷಕ್ಕೆ ಆಘಾತ ಮೂಡಿಸಿದೆ.
 
ಹಿರಿಯ ಕಾಂಗ್ರೆಸ್ ಮುಖಂಡ ಶಂಕರ್ ಸಿಂಗ್ ವಘೇಲಾ ಪಕ್ಷವನ್ನು ತ್ಯಜಿಸಿದ ನಂತರ ಕಾಂಗ್ರೆಸ್ ಪಕ್ಷ ಅತಂತ್ರ ಸ್ಥಿತಿಯನ್ನು ಎದುರಿಸುತ್ತಿದೆ. ವಘೇಲಾ ಬಿಜೆಪಿಗೆ ಸೇರ್ಪಡೆಯಾಗುವುದಿಲ್ಲವೆಂದು ಘೋಷಿಸಿದ್ದರೂ ಅನುಮಾನ ಮಾತ್ರ ಎಲ್ಲರನ್ನು ಕಾಡುತ್ತಿದೆ.
 
ಗುಜರಾತ್‌ನಿಂದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಸಭೆಗೆ ಸ್ಪರ್ಧಿಸುತ್ತಿರುವುದರಿಂದ, ಕಾಂಗ್ರೆಸ್ ಶಾಸಕರ ರಾಜೀನಾಮೆಯಲ್ಲಿ ಅವರ ಕೈವಾಡವಿರಬಹುದು ಎಂದು ಹಿರಿಯ ಕಾಂಗ್ರೆಸ್ ನಾಯಕರು ಶಂಕಿಸಿದ್ದಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನಮ್ಮ ಮೆಟ್ರೋದಲ್ಲಿ ಹಿಂದಿ ಬೇಡ: ಕೇಂದ್ರಕ್ಕೆ ಸಿಎಂ ಪತ್ರ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ಕುರಿತಂತೆ ವ್ಯಾಪಕ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ...

news

ಪಾಕಿಸ್ತಾನ: ಪ್ರಧಾನಿ ಹುದ್ದೆ ತ್ಯಜಿಸಿದ ನವಾಜ್ ಷರೀಫ್

ಇಸ್ಲಾಮಾಬಾದ್: ಪನಾಮಾ ಪೇಪರ್ ಪ್ರಕರಣದಲ್ಲಿ ಭ್ರಷ್ಟಾಚಾರವೆಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್ ...

news

ಧರ್ಮಸಿಂಗ್ ಅಂತ್ಯಸಂಸ್ಕಾರಕ್ಕೆ ನೆಲೋಗಿಗೆ ಆಗಮಿಸಿದ ಸಿಎಂ

ಜೇವರ್ಗಿ: ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದರಾಮಯ್ಯ ...

news

ವಿನಯ್ ನನ್ನ ಅಧಿಕೃತ ಪಿಎ ಅಲ್ಲ: ಉಲ್ಟಾ ಹೊಡೆದ ಕೆ.ಎಸ್. ಈಶ್ವರಪ್ಪ

ಬೆಂಗಳೂರು: ಆಪ್ತ ಸಹಾಯಕ ವಿನಯ್ ಅಪಹರಣ ಪ್ರಕರಣದಲ್ಲಿ ಕಾಂಗ್ರೆಸ್ ಷಡ್ಯಂತ್ರ ನಡೆಸುತ್ತಿದೆ ಎಂದು ...

Widgets Magazine Widgets Magazine Widgets Magazine