Widgets Magazine
Widgets Magazine

ಕೋರೆಗಾಂವ್ ಹಿಂಸಾಚಾರದಲ್ಲಿ ಆರ್‌ಎಸ್‌ಎಸ್‌ ಕೈವಾಡ– ಮಲ್ಲಿಕಾರ್ಜುನ ಖರ್ಗೆ ಆರೋಪ

ನವದೆಹಲಿ, ಬುಧವಾರ, 3 ಜನವರಿ 2018 (14:43 IST)

Widgets Magazine

ಕೋರೆಗಾಂವ್ ವಿಜಯೋತ್ಸವದ ಹಿಂಸಾಚಾರ ಪ್ರಕರಣ ಹಿಂದೆ ರಾಷ್ಟ್ರೀಯ ಸ್ವಯಂ ಸೇವಾ ಸಂಘದ (ಆರ್‌ಎಸ್‌ಎಸ್) ಕೈವಾಡವಿದೆ ಎಂದು ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.
 
ಕೋರೆಗಾಂವ್‌ ಹಿಂಸಾಚಾರ ಲೋಕಸಭೆಯಲ್ಲೂ ಪ್ರತಿಧ್ವನಿಸಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭೆಯಲ್ಲಿ ಮಾತನಾಡಿ, ಬಿಜೆಪಿ ಆಡಳಿತದಲ್ಲಿರುವ ಪ್ರದೇಶಗಳಲ್ಲೇ ಹೆಚ್ಚು ಹಿಂಸಾಚಾರಗಳು ನಡೆಯುತ್ತಿವೆ. ಭೀಮ್ ಕೋರೆಗಾಂವ್ ಹಿಂಸಾಚಾರಕ್ಕೆ ಮಹಾರಾಷ್ಟ್ರ ಸರ್ಕಾರವೇ ನೇರ ಹೊಣೆ. ಸುರ್ಪೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯಬೇಕು. ಹಿಂಸಾಚಾರಕ್ಕೆ ಕಾರಣರಾದವನ್ನು ಹಿಡಿದು ಶಿಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ.
 
ಈ ವಿಷಯದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮೌನವಾಗಿ ಇರಬಾರದು. ಹಿಂಸಾಚಾರದ ಬಗ್ಗೆ ಸದನಕ್ಕೆ ಉತ್ತರಿಸಬೇಕು ಪಟ್ಟು ಹಿಡಿದರು. ಇದಕ್ಕೆ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದು ಪುಣೆ ಹಿಂಚಾಸಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದಿದ್ದಾರೆ.
 
ಇದರಿಂದ ಸದನದಲ್ಲಿ ಗದ್ದಲ, ಕೋಲಾಹಲ ಉಂಟಾಯಿತು. ಸ್ಪೀಕರ್ ಸುಮಿತ್ರ ಮಹಾಜನ್ ಅವರು ಸದವನ್ನು ಮುಂದೂಡಿದರು
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ವೀರಶೈವ, ಲಿಂಗಾಯತ ಎರಡೂ ಒಂದೇ– ಬಿಎಸ್‌ವೈ

ವೀರಶೈವ, ಲಿಂಗಾಯತ ಎರಡೂ ಒಂದೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ...

news

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಭೂ ಹಗರಣದ ದಾಖಲೆ ಬಿಡುಗಡೆಗೊಳಿಸಿದ ಬಿಜೆಪಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭೂ ಹಗರಣವೊಂದು ಸುತ್ತಿಕೊಂಡಿದೆ. ಸಿದ್ದರಾಮಯ್ಯ ವಿರುದ್ಧ ಭೂ ಹಗರಣದ ...

news

ಸ್ವಚ್ಛ, ಪ್ರಾಮಾಣಿಕ ಆಡಳಿತ ನೀಡುತ್ತೇನೆಂದು ರಕ್ತದಲ್ಲಿ ಬರೆದುಕೊಡುವೆ– ಬಿಎಸ್‌ವೈ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸ್ವಚ್ಛ ಹಾಗೂ ಪ್ರಾಮಾಣಿಕ ಆಡಳಿತ ...

news

ಕೂಡ್ಲಿಗಿ ಶಾಸಕ ನಾಗೇಂದ್ರ ಬಿಜೆಪಿಯಲ್ಲೇ ಇರುತ್ತಾರೆ– ಸೋಮಶೇಖರರೆಡ್ಡಿ

ಕೂಡ್ಲಿಗಿ ಶಾಸಕ ಬಿ.ನಾಗೇಂದ್ರ ಅವರು ಎಂದಿಗೂ ಬಿಜೆಪಿಯಲ್ಲೇ ಇರುತ್ತಾರೆ. ಅವರು ಕಾಂಗ್ರೆಸ್ ಪಕ್ಷ ...

Widgets Magazine Widgets Magazine Widgets Magazine