ಆಧಾರ ವಿರುದ್ಧದ ಅರ್ಜಿಗಳ ವಿಚಾರಣೆಗೆ ಪ್ರತ್ಯೇಕ ಪೀಠ: ಸುಪ್ರೀಂಕೋರ್ಟ್

ನವದೆಹಲಿ, ಸೋಮವಾರ, 30 ಅಕ್ಟೋಬರ್ 2017 (19:02 IST)

ವಿವಿಧ ಸೇವೆಗಳನ್ನು ಮತ್ತು ಸರ್ಕಾರಿ ಕಲ್ಯಾಣ ಯೋಜನೆಗಳನ್ನು ಪಡೆಯುವ ಸಲುವಾಗಿ ಆಧಾರ್ ಕಡ್ಡಾಯವಾಗೊಳಿಸಿರುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ, ಸಲ್ಲಿಸಿದ ಅರ್ಜಿಗಳ ವಿಚಾರಣೆಗಾಗಿ ಪ್ರತ್ಯೇಕ ಸಂವಿಧಾನ ಪೀಠವನ್ನು ರಚಿಸಲಾಗುವುದು ಎಂದು ಸುಪ್ರೀಂಕೋರ್ಟ್ ಹೇಳಿದೆ. 
ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಎ.ಕೆ.ಖಾನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ನವೆಂಬರ್ ಕೊನೆಯ ವಾರದಲ್ಲಿ ಪ್ರತ್ಯೇಕ ಪೀಠದಲ್ಲಿ ವಿರುದ್ಧದ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದ್ಜಾರೆ.  
 
ಇದಕ್ಕಿಂತ ಮೊದಲು,  ವಿವಿಧ ಸಮಾಜ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯುವುದಕ್ಕಾಗಿ ಆಧಾರ್ ಕಡ್ಡಾಯ ಮಾಡಿರುವ ಕೇಂದ್ರ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಅರ್ಜಿ ಸಲ್ಲಿಸಿ ಪ್ರಶ್ನಿಸಿರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್, ಸಂಸತ್ತಿನ ಬಹುಮತದ ನಿರ್ಣಯವನ್ನು ರಾಜ್ಯ ಸರಕಾರ ಹೇಗೆ ಪ್ರಶ್ನಿಸಲು ಸಾಧ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದೆ. 
 
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಧಾರ ಕಡ್ಡಾಯಗೊಳಿಸಿರುವುದಕ್ಕೆ ವಿರೋಧವಾಗಿದ್ದಲ್ಲಿ ವೈಯಕ್ತಿಕವಾಗಿ ಕೋರ್ಟ್‌‍ಗೆ ಅರ್ಜಿ ಸಲ್ಲಿಸಲಿ ಎಂದು ಸುಪ್ರೀಂಕೋರ್ಟ್ ಸಲಹೆ ನೀಡಿದೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೋದಿ, ನೋಟು ನಿಷೇಧ, ಜಿಎಸ್‌ಟಿ ದುರಂತವೆಂದು ಒಪ್ಪಿಕೊಳ್ಳಲಿ: ರಾಹುಲ್ ಗಾಂಧಿ

ನವದೆಹಲಿ: ಕೇಂದ್ರ ಸರಕಾರದ ನೋಟು ನಿ|ಷೇಧ ಮತ್ತು ಜಿಎಸ್‌ಟಿ ಜಾರಿಯಂತಹ ಅವಳಿ ತೀರ್ಮಾನಗಳು ದೇಶದ ...

news

ಬಿಜೆಪಿಗೆ ಚುನಾವಣೆ ಸೋಲಿನ ಭೀತಿ, ಹತಾಶೆ ಕಾಡುತ್ತಿದೆ: ಸಿಎಂ

ಮೈಸೂರು: ಬಿಜೆಪಿ ತಮ್ಮ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವುದು ಸೋಲು ಮತ್ತು ಹತಾಶೆಯ ...

news

17 ವರ್ಷದ ಹದಿಹರೆಯದ ಯುವತಿಯ ಮೂವರು ಕಾಮುಕರಿಂದ ಅತ್ಯಾಚಾರ

ಚಂಡೀಗಡ್: 17 ವರ್ಷದ ಹದಿ ಹರೆಯದ ಯುವತಿಯ ಮೇಲೆ ಮೂವರು ಕಾಮುಕರು ಅತ್ಯಾಚಾರವೆಸಗಿದ ಹಿನ್ನೆಲೆಯಲ್ಲಿ ...

news

ಧಾರವಾಡದಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ: ಮಹಿಳೆ ಬಂಧನ

ಧಾರವಾಡ: ನಗರದಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆಯಾಗಿದ್ದು, ಧಾರವಾಡ ರೈಲ್ವೆ ಸುರಕ್ಷಾ ದಳ ಪೊಲೀಸರು ಓರ್ವ ...

Widgets Magazine
Widgets Magazine